EBM News Kannada
Leading News Portal in Kannada

5000 ಕಿ.ಮೀ ವ್ಯಾಪ್ತಿ ಗುರಿ ತಲುಪಬಲ್ಲ ಅಗ್ನಿ–5 ಕ್ಷಿಪಣಿ ಪರೀಕ್ಷೆ ಯಶಸ್ವಿ

ಭುವನೇಶ್ವರ್(ಒಡಿಶಾ): ಏಷ್ಯಾ ಖಂಡದ ಎಲ್ಲಾ ಗುರಿಗಳ ಮೇಲೆ ದಾಳಿ ನಡೆಸಬಲ್ಲ ಅಣ್ವಸ್ತ್ರ ಸಿಡಿತಲೆಗಳನ್ನು ಹೊತ್ತೊಯ್ಯಬಲ್ಲ ತ ಶಕ್ತಿಶಾಲಿ ಖಂಡಾಂತರ ಕ್ಷಿಪಣಿ ‘ಅಗ್ನಿ–5’ರ ಪರೀಕ್ಷೆ ಯಶಸ್ವಿಯಾಗಿದೆ.

ಭಾರತೀಯ ರಕ್ಷಣಾ ಮತ್ತು ಸಂಶೋಧನಾ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿರುವ ಕ್ಷಿಪಣಿಯ ಪರೀಕ್ಷೆಯನ್ನು ಒಡಿಶಾ ಕರಾವಳಿಯಲ್ಲಿನ ಅಬ್ದುಲ್‌ ಕಲಾಂ ದ್ವೀಪದಲ್ಲಿ ಭಾನುವಾರ ಮುಂಜಾನೆ ನಡೆಸಲಾಗಿದೆ.

ಬೆಳಿಗ್ಗೆ 9.50 ಕ್ಕೆ ಈ ಪರೀಕ್ಷೆ ನಡೆದಿದ್ದು ಅಗ್ನಿ–5’ರ ಯಶಸ್ವಿ ಪರೀಕ್ಷೆಯಿಂದ ಭಾರತದ ರಕ್ಷಣಾ ವ್ಯವಸ್ಥೆಗೆ ಇನ್ನಷ್ಟು ಶಕ್ತಿ ತುಂಬಿದಂತಾಗಿದೆ ಎಂದು ಸೇನಾ ಮೂಲಗಳು ಹೇಳಿದೆ.

ಮೂರು ಹಂತಗಳ ಎಂಜಿನ್‌ ಹೊಂದಿರುವ, ನೆಲದಿಂದ ನೆಲಕ್ಕೆ ಚಿಮ್ಮುವ ಕ್ಷಿಪಣಿ ಇದಾಗಿದ್ದು ಪಥದರ್ಶಕ, ಪಥ ನಿರ್ದೇಶನ ವ್ಯವಸ್ಥೆ, ಅಣ್ವಸ್ತ್ರ ಸಿಡಿತಲೆ ಮತ್ತು ಎಂಜಿನ್‌ ಅಭಿವೃದ್ಧಿಯಲ್ಲಿ ಹೊಸ ತಂತ್ರಜ್ಞಾನಗಳನ್ನು ಹೊಂದಿದೆ.ನಿಖರವಾಗಿ ಗುರಿಯನ್ನು ತೋರುವ ವ ರಿಂಗ್‌ ಲೇಸರ್‌ ಗೈರೊ ಬೇಸ್ಡ್‌ ಇನರ್ಷಿಯಲ್‌ ನೇವಿಗೇಷನ್‌ ಸಿಸ್ಟಮ್‌ (ಆರ್‌ಐಎನ್‌ಎಸ್) ಮತ್ತು ಅತ್ಯಾಧುನಿಕವಾದ ಸೂಕ್ಷ್ಮ ಪಥದರ್ಶಕ ವ್ಯವಸ್ಥೆಗಳನ್ನು (ಎಂಐಎಸ್‌ಎಸ್‌) ಕ್ಷಿಪಣಿಯಲ್ಲಿ ಅಳವಡಿಸಲಾಗಿದೆ.