ಶ್ರೀನಗರ: ಪತ್ರಕರ್ತ, ರೈಸಿಂಗ್ ಕಾಶ್ಮೀರ್ ಪತ್ರಿಕೆ ಸಂಪಾದಕ ಶುಜಾತ್ ಬುಖಾರಿ ಹತ್ಯೆ
ಶ್ರೀನಗರ: ಶ್ರೀನಗರದಲ್ಲಿ ರೈಸಿಂಗ್ ಕಾಶ್ಮೀರ್ ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ಶುಜಾತ್ ಬುಖಾರಿಯನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ.
ಅನಾಮಿಕ ಗನ್ ಮ್ಯಾನ್ ಕಚೇರಿಯಿಂದ ಇಫ್ತಾರ್ ಕೂಟಕ್ಕೆ ತೆರಳುತ್ತಿದ್ದಾಗ ಗುಂಡಿನ ದಾಳಿ ನಡೆದಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಬುಖಾರಿ ಅವರಿಗೆ ರಕ್ಷಣೆ ನೀಡುತ್ತಿದ್ದ ಇಬ್ಬರು ಪೊಲೀಸರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.