EBM News Kannada
Leading News Portal in Kannada

ಜಮ್ಮು ಕಾಶ್ಮೀರ: ಭಾರತೀಯ ಸೇನೆಯಿಂದ 4 ಉಗ್ರರ ಹತ್ಯೆ

ಶ್ರೀನಗರ: ಭಾರತೀಯ ಸೇನೆ ಉತ್ತರ ಕಾಶ್ಮೀರದ ಬಾಂಡೀಪೋರದಲ್ಲಿ ಸೋಮವಾರ ಬೆಳಿಗ್ಗೆ ನಡೆಸಿದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ನಾಲ್ಕು ಮಂದಿ ಉಗ್ರರನ್ನು ಹತ್ಯೆಗೈದಿದೆ.

ರಂಜಾನ್ ಹಬ್ಬದ ನಂತರ ನಡೆದ ಮೊದಲ ಉಗ್ರ ನಿಗ್ರಹ ಕಾರ್ಯಾಚರಣೆ ಇದಾಗಿದೆ. ಉಗ್ರರ ಮತ್ತು ಭಾರತೀಯ ಸೇನೆ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ.

ಪನಾರ್ ಅರಣ್ಯ ಪ್ರದೇಶದಲ್ಲಿ ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಉ‌ಗ್ರರನ್ನು ಹತ್ತಿಕ್ಕಲು ಬೇಕಾದ ಕ್ರಮಗಳನ್ನು ಕೈಗೊಳ್ಳುವಂತೆ ಭದ್ರತಾ ಪಡೆಗೆ ಗೃಹ ಸಚಿವಾಲಯ ಮನವಿ ಮಾಡಿದ ಬೆನ್ನಲ್ಲೇ ಯೋಧರು 4 ಉಗ್ರರನ್ನು ಹತ್ಯೆಗೈದಿದ್ದಾರೆ.

ಕಳೆದ ವಾರ ಇಲ್ಲಿ ನಡೆದ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತ್ಯೆಯಾಗಿದ್ದರು. ಒಬ್ಬ ಯೋಧ ಹುತಾತ್ಮರಾಗಿದ್ದರು.