EBM News Kannada
Leading News Portal in Kannada

ಕೊರೋನಾ ಸಂಕಷ್ಟ ಸಮಯದಲ್ಲಿ ಹಣ ಬಿಡುಗಡೆ ಮಾಡದ ಕೇಂದ್ರದ ವಿರುದ್ಧ ಮುಗಿಬಿದ್ದ ಕಾಂಗ್ರೆಸ್ ಮುಖ್ಯಮಂತ್ರಿಗಳು

ನವದೆಹಲಿ: ರಾಜ್ಯಗಳಿಗೆ ಸಂಪನ್ಮೂಲ ಕೊಡದೆ ಅಸಹಕಾರ ತೋರುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖ್ಯಮಂತ್ರಿಗಳು ಅಸಮಾಧಾನ ಹೊರಹಾಕಿದ್ದಾರೆ.

ಕೊರೋನಾ ಸಂಕಷ್ಟ ಪರಿಸ್ಥಿತಿಯಲ್ಲೂ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ. ಹಣ ಇಲ್ಲದೆ ಈ ಕಷ್ಟದ ಪರಿಸ್ಥಿತಿ ನಿಭಾಯಿಸುವುದು ಹೇಗೆ? ಎಂದು ಕೇಂದ್ರ ಸರ್ಕಾರದ ಮೇಲೆ ಪಂಜಾಬ್, ರಾಜಸ್ಥಾನ, ಪುದುಚೇರಿ, ಛತ್ತೀಸ್​ಗಢ ಕಾಂಗ್ರೆಸ್ ಮುಖ್ಯಮಂತ್ರಿಗಳು ಮುಗಿಬಿದ್ದು, ಕೂಡಲೇ ಪ್ಯಾಕೇಜ್ ಘೋಷಿಸುವಂತೆ ಕೇಂದ್ರಕ್ಕೆ ಒತ್ತಾಯ ಹಾಕಿದ್ದಾರೆ.
ಕೊರೋನಾ ವಿಶೇಷ ಪ್ಯಾಕೇಜ್ ಬಿಡುಗಡೆ ವಿಷಯವಾಗಿ ಪಂಜಾಬ್​ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಪ್ರಧಾನಿ ಮೋದಿ ಹಾಗೂ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ‌ ಪತ್ರ ಬರೆದಿದ್ದಾರೆ.

ಕೊರೋನಾ ಸಂಕಷ್ಟ ಸಮಯದಲ್ಲಿ ಮಾರಕ ಸೋಂಕಿನ ವಿರುದ್ಧ ಹೋರಾಡಲು ರಾಜ್ಯಗಳಿಗೆ ತಕ್ಷಣವೇ ಹಣ ಬಿಡುಗಡೆ ಮಾಡಿ. 3 ತಿಂಗಳವರೆಗೆ ವಿಶೇಷ ಕೋವಿಡ್ ಗ್ರ್ಯಾಂಟ್ ನೀಡಿ. ಹಣಕಾಸು ಆಯೋಗದ ಶಿಫಾರಸು ಪರಿಶೀಲಿಸಿ ಎಂದು 3 ಅಂಶಗಳನ್ನು ಒಳಗೊಂಡ ಪತ್ರವನ್ನು ಪ್ರಧಾನಿ ಮೋದಿ ಅವರಿಗೆ ಬರೆದಿದ್ದಾರೆ. ಹಾಗೆಯೇ ಈ ಅಂಶಗಳ ಬಗ್ಗೆ ಗಮನ ಸೆಳೆಯುವಂತೆ ಎಲ್ಲಾ ರಾಜ್ಯಗಳ ಸಿಎಂಗಳಿಗೂ ಅಮರೀಂದರ್ ಸಿಂಗ್ ಅವರು ಪತ್ರ ಬರೆದಿದ್ದಾರೆ.