EBM News Kannada
Leading News Portal in Kannada

ಮೊದಲ ಬಾರಿಗೆ ಕ್ರಿಕೆಟ್ ಇತಿಹಾಸದಲ್ಲಿ 2ನೇ ದಿನದಲ್ಲಿ ಟೆಸ್ಟ್ ಪಂದ್ಯ ಮುಗಿಸಿ ಭಾರತ ತಂಡದ ದಾಖಲೆ!

0

ಬೆಂಗಳೂರು: ಟೀಂ ಇಂಡಿಯಾ ಹಾಗೂ ಆಫ್ಘಾನಿಸ್ತಾನ ನಡುವಿನ ಐತಿಹಾಸಿಕ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಫ್ಘಾನಿಸ್ತಾನ ವಿರುದ್ಧ 262 ರನ್ ಮತ್ತು ಇನ್ನಿಂಗ್ಸ್ ಜಯ ಸಾಧಿಸಿ ಐತಿಹಾಸಿಕ ದಾಖಲೆ ಬರೆದಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಭಾರತ ಆಫ್ಘಾನಿಸ್ತಾನವನ್ನು ಎರಡನೇ ದಿನದಲ್ಲೇ ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದೆ. ಇದಕ್ಕೂ ಮೊದಲು ಭಾರತ ಎರಡೇ ದಿನದಲ್ಲಿ ಯಾವುದೇ ಟೆಸ್ಟ್ ಪಂದ್ಯವನ್ನು ಗೆದ್ದಿರಲಿಲ್ಲ. ಆದರೆ ಇದೀಗ ಆಫ್ಘಾನಿಸ್ತಾನದ ವಿರುದ್ಧ 262 ರನ್ ಮತ್ತು ಇನ್ನಿಂಗ್ಸ್ ಜಯ ಸಾಧಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 474 ರನ್ ಗಳಿಗೆ ಆಲ್ ಔಟ್ ಆಯಿತು. ನಂತರ ಇನ್ನಿಂಗ್ಸ್ ಆರಂಭಿಸಿದ ಆಫ್ಘಾನ್ ತಂಡ ಖ್ಯಾತ ಸ್ಪಿನ್ನರ್ ಗಳಾದ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜಾರ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ್ದು 109 ರನ್ ಗಳಿಗೆ ಆಲ್ ಔಟ್ ಆಯಿತು. ಭಾರತ ವಿರುದ್ಧ ಆಫ್ಘಾನಿಸ್ತಾನ ಮೊದಲ ಇನ್ನಿಂಗ್ಸ್ ನಲ್ಲಿ ಅಲ್ಪಮೊತ್ತಕ್ಕೆ ಆಲ್ ಔಟ್ ಆಗಿದ್ದರಿಂದ ಫಾಲೋ ಆನ್ ಗೆ ಸಿಲುಕಿತ್ತು. ಮತ್ತೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ಆಫ್ಘಾನ್ ತಂಡವನ್ನು ಭಾರತ 103 ರನ್ ಗಳಿಗೆ ಆಲೌಟ್ ಮಾಡಿತು.

ಭಾರತ ಪರ ಎಲ್ಲಾ ಬೌಲರ್ ಗಳು ಉತ್ತಮ ಪ್ರದರ್ಶನ ನೀಡಿದ್ದು ಪಂದ್ಯ ಗೆಲುವಿಗೆ ಕಾರಣವಾಗಿದೆ. ಎರಡು ಇನ್ನಿಂಗ್ಸ್ ನಲ್ಲಿ ರವೀಂದ್ರ ಜಡೇಜಾ 6 ವಿಕೆಟ್, ಆರ್ ಅಶ್ವಿನ್ 5 ಹಾಗೂ ಇಶಾಂತ್ ಶರ್ಮಾ ಮತ್ತು ಉಮೇಶ್ ಯಾದವ್ ತಲಾ 4 ವಿಕೆಟ್ ಗಳನ್ನು ಪಡೆದಿದ್ದಾರೆ.

ಟೆಸ್ಟ್ ಕ್ರಿಕೆಟ್ ನಲ್ಲಿ ಇಂಗ್ಲೆಂಡ್ ತಂಡ 9 ಬಾರಿ ಎರಡನೇ ದಿನದಲ್ಲಿ ಪಂದ್ಯವನ್ನು ಗೆದ್ದು ಬೀಗಿದೆ. ಇನ್ನು ಆಸ್ಟ್ರೇಲಿಯಾ ಸಹ 8 ಬಾರಿ ಎರಡನೇ ದಿನದಲ್ಲಿ ಗೆಲುವು ದಾಖಲಿಸಿದೆ. ದಕ್ಷಿಣ ಆಫ್ರಿಕಾ 2 ಬಾರಿ ನ್ಯೂಜಿಲೆಂಡ್ 1 ಬಾರಿ ಗೆಲುವು ಸಾಧಿಸಿದೆ.

Leave A Reply

Your email address will not be published.