ಬೆಂಗಳೂರು: ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ 5000 ರೂ. ಪರಿಹಾರ ಹಣ ವಿತರಣೆ ಮಾಡಲು ಸಾರಿಗೆ ಇಲಾಖೆಯಿಂದ ಮಾರ್ಗಸೂಚಿ ಸಿದ್ಧಪಡಿಸಿದೆ. ಸಾರಿಗೆ ಆಯುಕ್ತರು ಸರ್ಕಾರದ ನಡವಳಿಕೆಗಳ ಪಟ್ಟಿಯನ್ನು ತಯಾರಿಸಿದ್ದಾರೆ.
ಸಾರಿಗೆ ಇಲಾಖೆ ಸಿದ್ದಪಡಿಸಿರುವ ಮಾರ್ಗಸೂಚಿಗಳು
ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲನೆ ಮಾಡಲು ಚಾಲನಾ ಪತ್ರ ಮತ್ತು ಬ್ಯಾಡ್ಜ್ ಹೊಂದಿರುವವರು ಮಾತ್ರ ಈ ಯೋಜನೆಯ ಫಲಾನುಭವಿಗಳು
ಫಲಾನುಭವಿಗಳು ಆಟೋರಿಕ್ಷಾ/ಟ್ಯಾಕ್ಸಿ ಚಾಲಕರಾಗಿದ್ದು ದಿನಾಂಕ 01-03-2020 ಕ್ಕೆ ಚಾಲ್ತಿಯಲ್ಲಿರುವ ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಪೋರ್ಟಲ್ನಲ್ಲಿ ನಮೂದಿಸಬೇಕು
ಚಾಲಕರ ಆಧಾರ್ ಕಾರ್ಡ್ ವಿವರಗಳನ್ನು ಪೋರ್ಟಲ್ನಲ್ಲಿ ನಮೂದಿಸಬೇಕು
ಚಾಲಕರ ಬ್ಯಾಂಕ್ ಅಕೌಂಟ್ ವಿವರ, ಸಂಬಂಧಪಟ್ಟ ಬ್ಯಾಂಕ್ ನ IFSC ಕೋಡ್MICR ಕೋಡ್ಗಳ ವಿವರಗಳನ್ನು ಪೋರ್ಟಲ್ನಲ್ಲಿ ಇರಬೇಕು
ಚಾಲಕರು ಚಾಲನೆ ಮಾಡುವ ವಾಹನದ ನೋಂದಣಿ ಸಂಖ್ಯೆ ವಿವರಗಳನ್ನು ಪೋರ್ಟಲ್ನಲ್ಲಿ ನಮೂದಿಸಬೇಕು
ವಾಹನ್ -4 ತಂತ್ರಾಂಶದಿಂದ ವಿವರಗಳನ್ನು ನೇರವಾಗಿ ಪಡೆಯುವುದು
ಚಾಲನಾ ಅನುಜ್ಞಾ ಪತ್ರದ ವಿವರಗಳನ್ನು ಸಾರಿಗೆ ಇಲಾಖೆಯ ಸಾರಥಿ-4 ತಂತ್ರಾಂಶದಿಂದ ನೇರವಾಗಿ ಪಡೆದುಕೊಳ್ಳಬೇಕು
ಆಟೋರಿಕ್ಷಾ/ಟ್ಯಾಕ್ಸಿ ಚಾಲಕರು ತಮ್ಮ ದೈನಂದಿನ ಉದ್ಯೋಗವನ್ನು ನಡೆಸಲಾಗದ ಆದಾಯ ಕಳೆದುಕೊಂಡಿರುವ ಬಗ್ಗೆ ಸ್ವಯಂ ಘೋಷಣೆ ಮಾಡಬೇಕು
ಅರ್ಹ ಚಾಲಕರು ತಮ್ಮ ಅರ್ಜಿಗಳನ್ನು “ಸೇವಾಸಿಂಧು” ಆ್ಯಪ್ ಮುಖಾಂತರ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ. ಸೇವಾಸಿಂಧು ವಿನಲ್ಲಿ ಸೂಕ್ತ ವ್ಯವಸ್ಥೆ ಮಾಡುವಂತೆ ಇ-ಆಡಳಿತ ಇಲಾಖೆಯನ್ನು ಕೋರಬಹುದಾಗಿದೆ
ಅರ್ಹ ಫಲಾನುಭವಿಗಳಿಗೆ ಆಧಾರ್ ಸಂಖ್ಯೆಯ ಮೂಲಕ DBT ಮಾಡಬೇಕು ಆನ್ಲೈನ್ ಮೂಲಕ ಬ್ಯಾಂಕಿಗೆ ಜಮಾ ಮಾಡಬೇಕು
ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಲು ಅನುವಾಗುವಂತೆ ಅರ್ಹ/ಅನರ್ಹ ಅರ್ಜಿದಾರರ ಪಟ್ಟಿಯನ್ನು ತಂತ್ರಾಂಶದಲ್ಲಿ ಅಳವಡಿಸಿಕೊಳ್ಳಬೇಕು