Ultimate magazine theme for WordPress.

ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು!; ನಿರ್ಧಾರವಾಗಲಿದೆ ಲಾಕ್​ಡೌನ್​ ಭವಿಷ್ಯ?

0

ಬೆಂಗಳೂರು (ಮೇ 12): ಲಾಕ್​ಡೌನ್​ ಮಧ್ಯೆಯೂ ಕೊರೋನಾ ವೈರಸ್​ ನಿಯಂತ್ರಣಕ್ಕೆ ಬರುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 3,604 ಮಂದಿಗೆ ಕೊರೋನಾ ಅಂಟಿದೆ. ಇದರ ಪರಿಣಾಮ ದೇಶದಲ್ಲಿ ಸೋಂಕಿತರ ಸಂಖ್ಯೆ 70,756ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಲಾಕ್​ಡೌನ್​ ಭವಿಷ್ಯ ನಿರ್ಧಾರವಾಗಲಿದೆ ಎನ್ನಲಾಗಿದೆ.

ಮೋದಿ ಅವರು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಿಎಂಒ ಅಧಿಕೃತ ಟ್ವಿಟ್ಟರ್​ ಖಾತೆಯಲ್ಲಿ ಟ್ವೀಟ್​ ಮಾಡಿದೆ. ಈ ವೇಳೆ ಲಾಕ್​ಡೌನ್​ ವಿಸ್ತರಣೆ ಬಗ್ಗೆ ಮೋದಿ ಮಾಹಿತಿ ನೀಡುವ ಸಾಧ್ಯತೆ ಇದೆ.

Leave A Reply

Your email address will not be published.