ಉಡುಪಿ, ಮೇ 20: ಕೃಷ್ಣನಗರಿ ಉಡುಪಿಯಲ್ಲಿ ಕಳೆದೆರಡು ದಿನಗಳಿಂದ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಇಂದು ಮತ್ತೆ ಆರು ಜನರಿಗೆ ಕೋವಿಡ್-19 ಸೋಂಕು ದೃಢಗೊಂಡಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ತಿಳಿಸಿದೆ.
ಮಾರ್ಚ್ 25 ರಿಂದ ಇಲ್ಲಿಯವರೆಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 22 ಪ್ರಕರಣಗಳು ಕಂಡುಬಂದಿವೆ. ಇದರಲ್ಲಿ ನಿನ್ನೆಯ ಒಂದು ಪ್ರಕರಣ ಚಿತ್ರದುರ್ಗ ಜಿಲ್ಲೆಯಿಂದ ಕ್ಯಾನ್ಸರ್ ಚಿಕಿತ್ಸೆಗಾಗಿ ಉಡುಪಿಗೆ ಬಂದಿದ್ದ ಬಾಲಕಿಗೆ ಸೋಂಕು ಕಂಡುಬಂದಿತ್ತು. ಆ ಬಾಲಕಿ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಕುಂದಾಪುರದಲ್ಲಿ ಓರ್ವ ವ್ಯಕ್ತಿ ಮೂರು ದಿನಗಳ ಹಿಂದೆ ಕೊರೊನಾ ವೈರಸ್ ನಿಂದ ಮೃತಪಟ್ಟಿದ್ದಾನೆ. ಜಿಲ್ಲೆಯಲ್ಲಿ ಆ್ಯಕ್ಟಿವ್ ಕೇಸ್ ಗಳ ಸಂಖ್ಯೆ 17 ಕ್ಕೆ ಏರಿದಂತಾಗಿದೆ. ನಾಲ್ಕು ಸೋಂಕಿತರು ಈಗಾಗಲೇ ಗುಣಮುಖರಾಗಿದ್ದಾರೆ.