ಲಕ್ನೋ, ಜೂನ್ 5: ಎಸ್ಯುವಿ ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ 9 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಪ್ರತಾಪ್ಗಢದಲ್ಲಿ ಶುಕ್ರವಾರ ನಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಬಹುತೇಕ ಭಾಗ ನುಜ್ಜುಗುಜ್ಜಾಗಿದೆ. ಮೃತದೇಹಗಳನ್ನು ಹೊರಕ್ಕೆ ತೆಗೆಯೆಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
ಈ ಅಒಘಾತದಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಬಿಹಾರದ ಭೋಜ್ಪುರ ಮೂಲದವರಾಗಿದ್ದು, ತವರಿಗೆ ತೆರಳುವಾಗ ಟ್ರಕ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಂಬನಿ ಮಿಡಿದಿದ್ದಾರೆ.ಬೆಳಗಿನ ಜಾವ 5.30ರ ಸುಮಾರಿಗೆ ಘಟನೆ ನಡೆದಿದೆ. ನವಾಬ್ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ವಾಜಿದ್ಪುರ್ ಪ್ರದೇಶದಲ್ಲಿ ಘಟನೆ ನಡೆದಿದೆ.