Ultimate magazine theme for WordPress.

ಒಂದೇ ದಿನ 10952 ಕೇಸ್: ವಿಶ್ವದಲ್ಲಿ 4ನೇ ಸ್ಥಾನಕ್ಕೇರಿದ ಭಾರತ

0

ದೆಹಲಿ, ಜೂನ್ 12: ಭಾರತದಲ್ಲಿ ಒಂದೇ ದಿನ 10,956 ಜನರಿಗೆ ಕೊರೊನಾ ವೈರಸ್ ತಗುಲಿದೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,97,535ಕ್ಕೆ ಏರಿಕೆಯಾಗಿದೆ.

ಮೊದಲ ಬಾರಿಗೆ ಭಾರತದಲ್ಲಿ ದಿನವೊಂದರಲ್ಲಿ ಹತ್ತು ಸಾವಿರ ಸೋಂಕು ವರದಿ ಮಾಡಿದೆ. ಕಳೆದ 24 ಗಂಟೆಯಲ್ಲಿ 396 ಜನರು ಸೋಂಕಿನಿಂದ ಸಾವನ್ನಪ್ಪಿದ್ದು, ಒಟ್ಟು ದೇಶದಲ್ಲಿ 8498 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

2.9 ಲಕ್ಷ ಸೋಂಕಿನ ಪೈಕಿ 1,47,195 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 1,41,842 ಪ್ರಕರಣಗಳು ಇನ್ನು ಸಕ್ರಿಯವಾಗಿದೆ. ಜೂನ್ 12ರ ವರದಿ ಬಳಿಕ ಅತಿ ಹೆಚ್ಚು ಸೋಂಕು ಹೊಂದಿರುವ ವಿಶ್ವದ ಪಟ್ಟಿಯಲ್ಲಿ ಭಾರತ ನಾಲ್ಕನೇ ಸ್ಥಾನಕ್ಕೇರಿದೆ. ಮುಂದೆ ಓದಿ….

ಅತಿ ಹೆಚ್ಚು ಕೊರೊನಾ ವೈರಸ್ ಪ್ರಕರಣ ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ (2,97,535) ನಾಲ್ಕನೇ ಸ್ಥಾನಕ್ಕೇರಿದೆ. ಕೊರೊನಾ ಹಾಟ್‌ಸ್ಪಾಟ್‌ ದೇಶಗಳಾದ ಯುಕೆ (291,409), ಹಾಗು ಸ್ಪೇನ್ (289,787) ದೇಶಗಳನ್ನು ಹಿಂದಿಕ್ಕಿದ ಭಾರತ ರಷ್ಯಾ ನಂತರದ ಸ್ಥಾನ ಪಡೆದುಕೊಂಡಿದೆ. ಇದು ಸಹಜವಾಗಿ ಭಾರತಕ್ಕೆ ಆತಂಕದ ವಿಚಾರ.

Leave A Reply

Your email address will not be published.