ಬೆಂಗಳೂರು, ಜೂನ್ 12 : ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಾಲ್ವರು ಸದಸ್ಯರು ಅವಿರೋಧವಾಗಿ ಆಯ್ಕೆಯಾದರು. ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ 2ನೇ ಬಾರಿಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಶುಕ್ರವಾರ ರಾಜ್ಯಸಭೆ ಚುನಾವಣೆಗೆ ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಕಣದಲ್ಲಿ ನಾಲ್ವರು ಅಭ್ಯರ್ಥಿಗಳು ಮಾತ್ರ ಉಳಿದ ಕಾರಣ ಎಲ್ಲರೂ ಅವಿರೋಧವಾಗಿ ಆಯ್ಕೆಯಾದರು. ಜೂನ್ 19ರಂದು ರಾಜ್ಯಸಭಾ ಸದಸ್ಯರ ಆಯ್ಕೆಗೆ ಚುನಾವಣಾ ದಿನಾಂಕ ನಿಗದಿಯಾಗಿತ್ತು.
ಬಿಜೆಪಿಯಿಂದ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ. ಕಾಂಗ್ರೆಸ್ನಿಂದ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್ನಿಂದ ಎಚ್. ಡಿ. ದೇವೇಗೌಡ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. ಮಲ್ಲಿಕಾರ್ಜುನ ಖರ್ಗೆ ಮತ್ತು ಎಚ್. ಡಿ. ದೇವೇಗೌಡ 2019ರ ಲೋಕಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದರು.
ಕರ್ನಾಟಕ ವಿಧಾನಸಭೆ ಮುಖ್ಯ ಕಾರ್ಯದರ್ಶಿ ವಿಶಾಲಾಕ್ಷಿ ರಾಜ್ಯಸಭೆ ಚುನಾವಣೆಯ ಚುನಾವಣಾಧಿಕಾರಿಯಾಗಿದ್ದಾರೆ. ಅವಿರೋಧವಾಗಿ ಆಯ್ಕೆಯಾದ ಎಲ್ಲಾ ಅಭ್ಯರ್ಥಿಗಳಿಗೂ ಅವರು ಪ್ರಮಾಣ ಪತ್ರವನ್ನು ನೀಡಲಿದ್ದಾರೆ.