Ultimate magazine theme for WordPress.

ಕಾಂಗ್ರೆಸ್ ಶಾಸಕರ ರಾಜೀನಾಮೆ; ರಾಜ್ಯಸಭೆ ಚುನಾವಣೆ ಲೆಕ್ಕಾಚಾರ ಉಲ್ಟಾ

0

ಅಹಮದಾಬಾದ್, ಜೂನ್ 04 : ರಾಜ್ಯಸಭೆ ಚುನಾವಣೆ ಹತ್ತಿರವಿರುವಾಗಲೇ ಗುಜರಾತ್‌ ಕಾಂಗ್ರೆಸ್‌ನ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಚುನಾವಣೆಯಲ್ಲಿ 2 ಸೀಟುಗಳಲ್ಲಿ ಗೆಲ್ಲುವ ಪಕ್ಷದ ತಂತ್ರಕ್ಕೆ ಹಿನ್ನಡೆಯಾಗಿದೆ.

ಗುರುವಾರ ಅಕ್ಷಯ್ ಪಾಟೀಲ್ ಮತ್ತು ಜಿಟು ಭಾಯ್ ಎಂಬ ಇಬ್ಬರು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ಇಂದು ಸಂಜೆ ಅಥವ ಶುಕ್ರವಾರ ಮತ್ತೊಬ್ಬ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ.

“ಸ್ವಯಂ ಪ್ರೇರಿತವಾಗಿ ಇಬ್ಬರು ಶಾಸಕರು ರಾಜೀನಾಮೆ ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ” ಎಂದು ಗುಜರಾತ್ ವಿಧಾನಸಭೆ ಸ್ಪೀಕರ್ ರಾಜೇಂದ್ರ ತ್ರಿವೇದಿ ಹೇಳಿದ್ದಾರೆ. ಮಾರ್ಚ್‌ನಲ್ಲಿ 5 ಶಾಸಕರು ರಾಜೀನಾಮೆ ನೀಡಿದ ಬಳಿಕ ವಿಧಾನಸಭೆಯಲ್ಲಿ ಪಕ್ಷದ ಬಲ 68ಕ್ಕೆ ಕುಸಿದಿತ್ತು.

Leave A Reply

Your email address will not be published.