ನವದೆಹಲಿ, ಜನವರಿ.22: ಭಾರತದಲ್ಲಿ ಕೊರೊನಾವೈರಸ್ ವಿರುದ್ಧ ಸಮರ ಸಾರುವ ನಿಟ್ಟಿನಲ್ಲಿ ಲಸಿಕೆ ಅಭಿಯಾನ ಆರಂಭಿಸಲಾಗಿದೆ. ದೇಶಾದ್ಯಂತ ಕೊವಿಡ್-19 ಲಸಿಕೆ ಹಾಕಿಸಿಕೊಳ್ಳಲು ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯಕೀಯ ಸಿಬ್ಬಂದಿಯೇ ಹಿಂದೇಟು ಹಾಕುತ್ತಿದ್ದಾರೆ.
ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಳ್ಳಲು ಬಹುತೇರ ವೈದ್ಯಕೀಯ ಸಿಬ್ಬಂದಿ ವಿರೋಧ ವ್ಯಕ್ತಪಡಿಸುತ್ತದ್ದಾರೆ. ಅದರ ಬದಲಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಲಸಿಕೆಯನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.
ಜನವರಿ.16ರಂದು ಮೊದಲ ದಿನ ಕೊವ್ಯಾಕ್ಸಿನ್ ಲಸಿಕೆ ಪಡೆಯುವವರ ಸಂಖ್ಯೆ ದಿನೇ ದಿನೆ ಇಳಿಮುಖವಾಗುತ್ತಿದೆ. ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸಿರುವ ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಂಡವರಲ್ಲಿ ಆರೋಗ್ಯ ಸಂಬಂಧಿತ ಸಮಸ್ಯೆ, ಅಡ್ಡಪರಿಣಾಮ ಕಾಣಿಸಿಕೊಳ್ಳುತ್ತಿವೆ. ಈ ಹಿನ್ನೆಲೆ ಎಂಥವರು ಕೊವ್ಯಾಕ್ಸಿನ್ ಲಸಿಕೆ ಪಡೆದುಕೊಳ್ಳುವುದು ಸೂಕ್ತ ಎನ್ನುವ ಬಗ್ಗೆ ಸ್ವತಃ ಸಂಸ್ಥೆ ಈಗಾಗಲೇ ಸಲಹಾ ಪಟ್ಟಿ ಬಿಡುಗಡೆಗೊಳಿಸಿದೆ.