Ultimate magazine theme for WordPress.

ಕೋವ್ಯಾಕ್ಸಿನ್ ರೂಪಾಂತರಿ ಕೊರೊನಾ ಸೋಂಕಿನ ಮೇಲೂ ಪರಿಣಾಮಕಾರಿ

0

ತಿರುವನಂತಪುರಂ,ಫೆಬ್ರವರಿ 19: ಕೋವ್ಯಾಕ್ಸಿನ್ ಕೊರೊನಾ ಲಸಿಕೆ ರೂಪಾಂತರಿ ಕೊರೊನಾ ಸೋಂಕಿನ ಮೇಲೂ ಪರಿಣಾಮ ಬೀರಲಿದೆ ಎಂದು ಅಧ್ಯಯನದ ಮೂಲಕ ತಿಳಿದುಬಂದಿದೆ. ಬ್ರಿಟನ್,ದಕ್ಷಿಣ ಆಫ್ರಿಕಾ ಹಾಗೂ ಬ್ರೆಜಿಲ್‌ನಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ನ ರೂಪಾಂತರ ತಳಿಗಳ ವಿರುದ್ಧ ಕೋವ್ಯಾಕ್ಸಿನ್ ಗುಣಾತ್ಮಕ ಪರಿಣಾಮ ಬೀರುವ ಸಾಧ್ಯತೆ ಇದೆ.

ಈ ಕುರಿತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಪ್ರಧಾನ ಕಾರ್ಯದರ್ಶಿ ಡಾ. ಬಲರಾಂ ಭಾರ್ಗವ್ ತಿಳಿಸಿದ್ದಾರೆ.ಗುರುವಾರ ಕೇರಳದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ವೆಬಿನಾರ್ ಉದ್ದೇಶಿಸಿ ಅವರು ಮಾತನಾಡಿದರು.

Leave A Reply

Your email address will not be published.