Ultimate magazine theme for WordPress.

ಖಾತೆ ಹಂಚಿಕೆ‌ ಕುರಿತಂತೆ ಡಾ. ಸುಧಾಕರ್ ವಿಚಾರದಲ್ಲಿ ಎಲ್ಲರೂ ತಟಸ್ಥ ನಿಲುವು ತಾಳಿದ್ಯಾಕೆ?

0

ಬೆಂಗಳೂರು, ಜ. 23: ಖಾತೆ ಹಂಚಿಕೆ ಬಳಿಕ ಎದ್ದಿದ್ದ ಅಸಮಾಧಾನವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಮನಗೊಳಿಸಿದ್ದಾರೆ. ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ 24 ಗಂಟೆಗಳಲ್ಲಿ ಮತ್ತೊಮ್ಮೆ ಮರು ಹಂಚಿಕೆ ಮಾಡುವ ಮೂಲಕ ಸಂಭಾವ್ಯ ಭಿನ್ನಮತವನ್ನು ಸಿಎಂ ಯಡಿಯೂರಪ್ಪ ಅವರು ಆರಂಭದಲ್ಲಿಯೇ ಚಿವುಟಿ ಹಾಕಿದ್ದಾರೆ. 6 ಸಚಿವರು ಬಯಸಿದ್ದ ಖಾತೆಗಳನ್ನು ಕೊಡಲಾಗಿದೆ. ಆದರೆ ಎಲ್ಲರಿಗಿಂತ ಮೊದಲು ಖಾತೆ ಮರು ಹಂಚಿಕೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ನಿರ್ಲಕ್ಷ ಮಾಡಲಾಗಿದೆಯಾ ಎಂಬ ಚರ್ಚೆ ಇದೀಗ ಶುರುವಾಗಿದೆ. ಅದಕ್ಕೆ ಕಾರಣವೂ ಇದೆ.

ಸಚಿವ ಶ್ರೀರಾಮುಲು ಅವರ ಬಳಿಯಿದ್ದ ಆರೋಗ್ಯ ಇಲಾಖೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರಿಗೆ ಯಡಿಯೂರಪ್ಪ ಅವರು ವಹಿಸಿದ್ದರು. ಆಗ ಶ್ರೀರಾಮುಲು ಅವರಿಗೆ ಅಸಮಾಧಾನವಾಗಿದ್ದರೂ ತೋರಿಸಿಕೊಂಡಿರಲಿಲ್ಲ. ಹೈಡ್ರಾಮಾದ ಬಳಿಕ ಸುಮ್ಮನಾಗಿದ್ದರು. ಈಗ ಡಾ. ಸುಧಾಕರ್ ಅವರು ಹೊಂದಿದ್ದ ಪ್ರಮುಖ ಖಾತೆಯನ್ನೇ ಸಿಎಂ ಹಿಂದಕ್ಕೆ ಪಡೆದಿದ್ದಾರೆ. ಡಾ. ಸುಧಾಕರ್ ಅವರಲ್ಲಿನ ವೈದ್ಯಕೀಯ ಶಿಕ್ಷಣ ಇಲಾಖೆ ಖಾತೆಯನ್ನು ಹಿಂದಕ್ಕೆ ಪಡೆದು ಒಂದು ಖಾತೆಯನ್ನು ಮಾತ್ರ ಅವರಿಗೆ ವಹಿಸಲಾಗಿದೆ. ಹೀಗಾಗಿ ರಾಜ್ಯ ಸಚಿವ ಸಂಪುಟ ಸಭೆಗೂ ಹೋಗದೆ ಸಚಿವ ಡಾ. ಸುಧಾಕರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಆದದ್ದೇನು?

Leave A Reply

Your email address will not be published.