Ultimate magazine theme for WordPress.

ಗಗನಕ್ಕೇರಿದ ಪೆಟ್ರೋಲ್, ಡೀಸೆಲ್ ದರ: ಹೊಸ ದಾಖಲೆ ಸೃಷ್ಟಿ

0

ನವದೆಹಲಿ, ಜನವರಿ 23: ದಿನೇ ದಿನೇ ಪೆಟ್ರೋಲ್, ಡೀಸೆಲ್ ದರಗಳು ಮತ್ತಷ್ಟು ತುಟ್ಟಿಯಾಗುತ್ತಿದ್ದು, ಶನಿವಾರ ಕೂಡ ಸರ್ಕಾರಿ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡಿದೆ. ಈ ಮೂಲಕ ತೈಲ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿ ಹೋಗಿದೆ.

ನವದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 25 ಪೈಸೆ ಹೆಚ್ಚಳಗೊಂಡು 85.70 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಲೀಟರ್‌ಗೆ 25 ಪೈಸೆ ಏರಿಕೆಗೊಂಡು 75.88 ರೂಪಾಯಿ ದಾಖಲಾಗಿದೆ.

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ದರ ದಾಖಲೆಯ ಮಟ್ಟದಲ್ಲಿ ಏರಿಕೆಯಾಗಿದ್ದು, ಕ್ರಮವಾಗಿ ಲೀಟರ್‌ಗೆ 93.59 ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ 83.85 ರೂ. ತಲುಪಿಬಿಟ್ಟಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಕಳೆದ ನಾಲ್ಕು ದಿನಗಳಲ್ಲಿ ಎಷ್ಟಿದೆ ಎಂಬುದರ ಮಾಹಿತಿ ಈ ಕೆಳಗಿದೆ.

Leave A Reply

Your email address will not be published.