Ultimate magazine theme for WordPress.

ಗರ್ಭಕೋಶದ ಆಪರೇಶನ್ ಗಾಗಿ ದಾಖಲಾದ ಶಿಕ್ಷಕಿಗೆ ಕೊರೊನಾ ವೈರಸ್!

0

ಬೆಂಗಳೂರು, ಜೂನ್.06: ನೊವೆಲ್ ಕೊರೊನಾ ವೈರಸ್ ಸೋಂಕು ಯಾವಾಗ, ಯಾರಿಗೆ, ಯಾವ ರೂಪದಲ್ಲಿ ಅಂಟಿಕೊಳ್ಳುತ್ತೆ ಎನ್ನುವುದೇ ತಿಳಿಯುತ್ತಿಲ್ಲ. ಕರ್ನಾಟಕದಲ್ಲಿ ಪ್ರತಿದಿನ ಕೊವಿಡ್–19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ.

ಬೆಂಗಳೂರಿನಲ್ಲಿ ಗರ್ಭಕೋಶದ ಸಮಸ್ಯೆ ಎಂದು ಆಸ್ಪತ್ರೆಗೆ ದಾಖಲಾದ ಶಿಕ್ಷಕಿಗೆ ಮಹಾಮಾರಿ ನೊವೆಲ್ ಕೊರೊನಾ ವೈರಸ್ ಸೋಂಕು ಅಂಟಿಕೊಂಡಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.

ಎರಡು ದಿನಗಳ ಹಿಂದೆಯಷ್ಟೇ ಟಿ.ದಾಸರಹಳ್ಳಿಯ ಹಾವನೂರು ಬಡಾವಣೆಯ ನಿವಾಸಿ 47 ವರ್ಷದ ಮಹಿಳೆಯು ಗರ್ಭಕೋಶದ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಆರಂಭಕ್ಕೂ ಮೊದಲು ಮಹಿಳೆಗೆ ಕೊರೊನಾ ವೈರಸ್ ಸೋಂಕು ತಪಾಸಣೆ ನಡೆಸಲಾಯಿತು.

Leave A Reply

Your email address will not be published.