Ultimate magazine theme for WordPress.

ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಡಗುತಾಣಗಳ ಮೇಲೆ ದಾಳಿ: 5 ಉಗ್ರರು ವಶಕ್ಕೆ

0

ಶ್ರೀನಗರ, ಮೇ 16: ಜಮ್ಮು ಮತ್ತು ಕಾಶ್ಮೀರದ ಬುದ್ಗಾಂನಲ್ಲಿ ಉಗ್ರರ ಅಡಗುತಾಣಗಳ ಮೇಲೆ ಪೊಲೀಸರು ದಾಳಿ ನಡೆಸಿ ಐವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಬುದ್ಗಾಂನಲ್ಲಿ ಉಗ್ರರ ಅಡಗುತಾಣಗಳಿರುವುದಾಗಿ ಖಚಿತ ಮಾಹಿತಿ ಲಭ್ಯವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ 53 ಆರ್ಆರ್ ಹಾಗೂ 153ನೇ ಸಿಆರ್’ಪಿಎಫ್ ಬೆಟಾಲಿಯನ್ ಪಡೆಗಳೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಲಾಗಿತ್ತು. ನಾಲ್ವರಲ್ಲಿ ರೆಹ್ಮಾನ್ ಲೋನಾ ಎಂಬಾದ ಎಲ್ಇಟಿ ಉಗ್ರರು ನೆಲೆಯೂರಲು ಅವಕಾಶ ಮಾಡಿಕೊಡುತ್ತಿದ್ದ ಎಂದು ತಿಳಿದುಬಂದಿದೆ. ಕೆಲ ತಿಂಗಳಿನಿಂದಲೂ ಈ ಗುಂಪು ಅಡಗಿಕುಳಿತು ತಮ್ಮ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದ್ದರು ಎಂದು ವರದಿಗಳು ತಿಳಿಸಿವೆ.

Leave A Reply

Your email address will not be published.