Ultimate magazine theme for WordPress.

ಡಿಕೆಶಿ ಪದಗ್ರಹಣ ಕಾರ್ಯಕ್ರಮದ ಹಿಂದೆ ರಾಜಕೀಯ ಷಡ್ಯಂತ್ರ: ಸಿದ್ದರಾಮಯ್ಯ

0

ಬೆಂಗಳೂರು, ಜೂ. 10: ಕೆಪಿಸಿಸಿ ಅಧ್ಯಕ್ಷ ಗಾದಿಗೆ ಏರಲು ಹಲವು ಆಕಾಂಕ್ಷಿಗಳು ಇನ್ನಿಲ್ಲದ ಪ್ರಯತ್ನ ನಡೆಸಿದ್ದರು. ಮೂಲ ಹಾಗೂ ವಲಸೆ ಕಾಂಗ್ರೆಸ್‌ ಎಂದು ಪ್ರತ್ಯೇಕ ಪ್ರಯತ್ನಗಳು ನಡೆಯುತ್ತಿರುವುದು ಕಾಂಗ್ರೆಸ್ ಹೈಕಮಾಂಡ್ ಗಮನಕ್ಕೂ ಬಂದಿತ್ತು. ಕರ್ನಾಟಕದಲ್ಲಿ ನಾಯಕರನ್ನು ಒಗ್ಗೂಡಿಸುವ ಅನಿವಾರ್ಯತೆ ಕೂಡ ಕಾಂಗ್ರೆಸ್ ಪಕ್ಷಕ್ಕಿತ್ತು. ಹೀಗಾಗಿ ಒಮ್ಮತ ಮೂಡಿಸಲು ಹೈಕಮಾಂಡ್ ಆಪ್ತವಲಯದ ಗುಲಾಂ ನಬಿ ಆಜಾದ್‌ ಅವರು ಹಲವು ಬಾರಿ ಬೆಂಗಳೂರಿಗೆ ಭೇಟಿ ಕೊಟ್ಟಿದ್ದರು. ಕಾಂಗ್ರೆಸ್ ಪಕ್ಷದ ಪ್ರಮುಖ 9 ನಾಯಕರೊಂದಿಗೆ ಹಲವು ಸಭೆಗಳನ್ನು ನಡೆಸಿದ್ದರು.

ಕೊರೊನಾ ವೈರಸ್‌ ಲಾಕ್‌ಡೌನ್ ಸಂದರ್ಭದಲ್ಲಿ ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಕೊರೊನಾ ವೈರಸ್‌ ತಂದಿದ್ದ ಆತಂಕದ ಸ್ಥಿತಿಯಲ್ಲಿ ಡಿಕೆಶಿ ರಾಜ್ಯ ಕಾಂಗ್ರೆಸ್ ಚುಕ್ಕಾಣಿ ಹಿಡಿದಿದ್ದರು. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಕೈಗೊಳ್ಳುತ್ತಿದ್ದ ನಿರ್ಧಾರಗಳ ಬಗ್ಗೆ ಮಾತನಾಡುವಂತಿರಲಿಲ್ಲ. ಈ ಮೊದಲು ಇಂತಹ ಸ್ಥಿತಿಯನ್ನು ನಿರ್ವಹಿಸಿದ್ದ ಅನುಭವ ಯಾರಿಗೂ ಅರಿವಿರಲಿಲ್ಲ. ಇದೀಗ ಪರಿಸ್ಥಿತಿ ಬದಲಾಗಿದೆ. ಒಂದೊಂದಾಗಿ ಲಾಕ್‌ಡೌನ್‌ ನಿಯಮಗಳು ಬದಲಾಗಿ ಅನ್‌ಲಾಕ್‌ ನಿಯಮಗಳು ಜಾರಿಗೆ ಬರುತ್ತಿವೆ. ಇದೇ ಸಂದರ್ಭದಲ್ಲಿ ಡಿಕೆಶಿ ಪದಗ್ರಹಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರು ಪದಗ್ರಹಣ ಕಾರ್ಯಕ್ರಮ ಮೂರನೇ ಬಾರಿ ಮುಂದೂಡಲಾಗಿದೆ. ಮೊದಲ ಎರಡು ಸಲ ರಾಜ್ಯದಲ್ಲಿ ಲಾಕ್‌ಡೌನ್ ಮಾರ್ಗಸೂಚಿ ಅನ್ವಯ ರಾಜ್ಯ ಬಿಜೆಪಿ ಸರ್ಕಾರ ಕಾರ್ಯಕ್ರಮಕ್ಕೆ ಅನುಮತಿ ಕೊಟ್ಟಿರಲಿಲ್ಲ. ಆದರೆ ಈ ಬಾರಿ ಪದಗ್ರಹಣಕ್ಕೆ ಡಿಕೆಶಿ ಹೊಸ ಯೋಜನೆ ರೂಪಿಸಿಕೊಂಡಿದ್ದರು.

ಕಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜೂನ್ 14 ರಂದು ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ಕೊಡುವಂತೆ ಪತ್ರ ಬರೆದಿದ್ದರು. ಇದಕ್ಕೂ ಮೊದಲು ಮೇ 24 ಹಾಗೂ ಜೂನ್ 7 ರಂದು ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ಕೊಡುವಂತೆ ಬರೆದಿದ್ದ ಪತ್ರಕ್ಕೂ ಸರ್ಕಾರ ನಿರಾಕರಿಸಿತ್ತು. ಈ ಬಾರಿ ಲಾಕ್‌ಡೌನ್ ಮಾರ್ಗಸೂಚಿ ಉಲ್ಲಂಘನೆ ಆಗದಂತೆ ಡಿಜಿಟಲ್ ತಂತ್ರಜ್ಞಾನಕ್ಕೆ ಮೊರೆ ಹೋಗಿದ್ದರು. ಆದರೂ ಜೂನ್ 14 ರಂದು ನಡೆಯಬೇಕಾಗಿದ್ದ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ಕೊಟ್ಟಿಲ್ಲ.

Leave A Reply

Your email address will not be published.