Ultimate magazine theme for WordPress.

ನಿಸರ್ಗ ಚಂಡಮಾರುತ: ಮಹಾರಾಷ್ಟ್ರ, ಕರ್ನಾಟಕ ಕರಾವಳಿಯಲ್ಲಿ ಭಾರಿ ಮಳೆಯ ಮುನ್ಸೂಚನೆ

0

ಬೆಂಗಳೂರು, ಜೂನ್ 1: ಅಂಫಾನ್ ಚಂಡಮಾರುತದ ಬಳಿಕ ಇದೀಗ ನಿಸರ್ಗ ಚಂಡಮಾರುತದ ಪ್ರಭಾವ ಆರಂಭವಾಗಿದೆ.

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ 100 ಮಂದಿಯನ್ನು ಬಲಿ ಪಡೆದುಕೊಂಡ ಬೆನ್ನಲ್ಲೇ ಇದೀಗ ಅರಬ್ಬೀ ಸಮುದ್ರದಲ್ಲಿ ಚಂಡಮಾರುತವೊಂದು ಸೃಷ್ಟಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳ ಕರಾವಳಿಯಲ್ಲಿ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ರೆಡ್ ಅಲರ್ಟ್ ಘೋಷಣೆ ಮಾಡಿದೆ.

ರಾಜ್ಯದ ಹಲವು ಭಾಗಗಳಲ್ಲಿ ಭಾನುವಾರದಿಂದಲೇ ಮಳೆ ಆರಂಭವಾಗಿದೆ. ಜೂನ್ 1ರ ಸೋಮವಾರದ ವೇಳೆಗೆ ವಾಯುಭಾರ ಕುಸಿತ ತೀವ್ರಗೊಳ್ಳಲಿದೆ. ಜೂನ್‌ 4ರವರೆಗೂ ಮಳೆ, ಬಿರುಗಾಳಿಯ ಆರ್ಭಟ ಮುಂದುವರಿಯಲಿದೆ. ಬಳಿಕ ಸೈಕ್ಲೋನ್‌ ತಗ್ಗಿದರೂ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಲಿದೆ ಎಂದು ಇಲಾಖೆ ಹೇಳಿದೆ. ಜೂನ್‌ 1 ರಿಂದ 4 ರವರೆಗೆ ಅರಬ್ಬಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಲಾಗಿದೆ.

ಮಹಾರಾಷ್ಟ್ರ, ಕರ್ನಾಟಕದ ಕರಾವಳಿ ಭಾಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ನಿಸರ್ಗ ಚಂಡಮಾರುತದಿಂದ ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ 11 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಬೆಂಗಳೂರಿನಲ್ಲಿ ಹವಾಮಾನ ಎಂದಿನಂತೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave A Reply

Your email address will not be published.