Ultimate magazine theme for WordPress.

ಪೊಲೀಸ್ ಇಲಾಖೆ ನೇಮಕಾತಿ; ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

0

ಬೆಂಗಳೂರು, ಜೂನ್ 12 : ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಲಾಕ್ ಡೌನ್ ಹಿನ್ನಲೆಯಲ್ಲಿ ಅರ್ಜಿಗಳನ್ನು ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಲಾಗಿದೆ. ಪೊಲೀಸ್ ಕಾನ್ಸ್‌ಟೇಬಲ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಈ ಹಿಂದೆ ನಿಗದಿಪಡಿಸಲಾಗಿದ್ದ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕಗಳನ್ನು ವಿಸ್ತರಣೆ ಮಾಡಲಾಗಿದೆ. ವಯೋಮಿತಿ ಸೇರಿದಂತೆ ಬೇರೆ ಯಾವುದೇ ಬದಲಾವಣೆಗಳಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಸಿ. ಪಿ. ಸಿ (ಪುರುಷ ಮತ್ತು ಮಹಿಳಾ) (ಕಲ್ಯಾಣ ಕರ್ನಾಟಕ) ಹುದ್ದೆಗಳ ಸಂಖ್ಯೆ 558, ಎ. ಪಿ. ಸಿ. (ಪುರುಷ)(ಸಿಎಆರ್/ಡಿಎಆರ್) (ಕಲ್ಯಾಣ ಕರ್ನಾಟಕ) ಹುದ್ದೆಗಳ ಸಂಖ್ಯೆ 444 ಇವುಗಳಿಗೆ ಅರ್ಜಿ ಸಲ್ಲಿಸಲು ಜುಲೈ 9 ಕೊನೆಯ ದಿನಾಂಕವಾಗಿದ್ದು, ಶುಲ್ಕಗಳನ್ನು ಜುಲೈ 13ರ ತನಕ ಪಾವತಿಸಬಹುದು.

Leave A Reply

Your email address will not be published.