Ultimate magazine theme for WordPress.

ಪ್ರಭಾಸ್ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ಬಾಲಿವುಡ್ ಸ್ಟಾರ್ ನಟಿ

0

ಟಾಲಿವುಡ್ ಸ್ಟಾರ್ ಪ್ರಭಾಸ್ ಸದ್ಯ ‘ಪ್ರಭಾಸ್ 20’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೆ ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ, ಇನ್ನೂ ಚಿತ್ರದ ಟೈಟಲ್ ಫೈನಲ್ ಮಾಡಿಲ್ಲ. ಈ ಸಿನಿಮಾ ಮುಗಿಯೊದರೊಳಗೆ ಪ್ರಭಾಸ್ 21ನೇ ಸಿನಿಮಾ ಸದ್ದು ಮಾಡುತ್ತಿದೆ.

ಪ್ರಭಾಸ್ 21ನೇ ಸಿನಿಮಾದ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಪ್ರಭಾಸ್ ಗೆ ನಾಯಕಿ ಯಾರಾಗಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಬಾಲಿವುಡ್ ನ ದೊಡ್ಡ ದೊಡ್ಡ ಸ್ಟಾರ್ ಕಲಾವಿದರ ಹೆಸರು ಕೇಳಿ ಬರುತ್ತಿದೆ. ಪ್ರಭಾಸ್ ಜೊತೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅಭಿನಯಿಸಲಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿತ್ತು. ಆದರೀಗ ಪ್ರಭಾಸ್ ಜೊತೆ ನಟಿ ಅಲಿಯಾ ಭಟ್ ನಟಿಸುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಮುಂದೆ ಓದಿ…

ಬಾಲಿವುಡ್ ನಟಿ ಅಲಿಯಾ ಭಟ್ ಟಾಲಿವುಡ್ ಸ್ಟಾರ್ ಪ್ರಭಾಸ್ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೆ ಅಲಿಯಾ ಜೊತೆ ಚಿತ್ರತಂಡ ಮಾತುಕತೆ ನಡೆಸಿದ್ದು, ಅಲಿಯಾ ಕಡೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಹೇಳಲಾಗುತ್ತಿದೆ. ಈ ವರ್ಷದ ಕೊನೆಯಲ್ಲಿ ಸಿನಿಮಾ ಸೆಟ್ಟೇರಿವ ಸಾಧ್ಯತೆ ಇದೆ.

ಈಗಾಗಲೆ ಆಲಿಯಾ ದಕ್ಷಿಣ ಭಾರತೀಯ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾದಲ್ಲಿ ಅಲಿಯಾ ನಟಿಸುತ್ತಿದ್ದಾರೆ. ಇದರ ಬೆನ್ನಲ್ಲೆ ಈಗ ಮತ್ತೊಂದು ದಕ್ಷಿಣ ಭಾರತೀಯ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

Leave A Reply

Your email address will not be published.