ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಕೊರೊನಾ ವೈರಸ್ನಿಂದ ಇಬ್ಬರು ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ರಾಜಧಾನಿಯಲ್ಲಿ ಕೊರೊನಾದಿಂದ ಇಬ್ಬರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.ಬೆಂಗಳೂರಿನ ಅಗ್ರಹಾರ ದಾಸರಹಳ್ಳಿ ಸೋಂಕಿತ ವೃದ್ಧೆ (61) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅನಾರೋಗ್ಯ ಹಿನ್ನೆಲೆಯಲ್ಲಿ ವೃದ್ಧೆಯನ್ನು ಕುಟುಂಬಸ್ಥರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆ ಸಿಬ್ಬಂದಿ ಕೊವಿಡ್-19 ಪರೀಕ್ಷೆ ನಡೆಸಿದಾಗ ಕೊರೊನಾ ಸೋಂಕು ತಗುಲಿರೋದು ಪತ್ತೆಯಾಗಿತ್ತು. ವೃದ್ಧೆಯ ಸಂಪರ್ಕದಲ್ಲಿದ್ದ ನಾಲ್ವರಿಗೆ ಸೋಂಕು ತಗುಲಿದೆ. ಸೋಂಕು ಪತ್ತೆಯಾದ 8 ದಿನಗಳ ಬಳಿಕ ಚಿಕಿತ್ಸ ಫಲಕಾರಿಯಾಗದೇ ವೃದ್ಧೆ ಸಾವನ್ನಪ್ಪಿದ್ದಾರೆ.
ಮಹಾಲಕ್ಷ್ಮಿ ಲೇಔಟ್ಟ್ನಲ್ಲಿ ಮೃತ ವೃದ್ಧ(65)ನ ರಿಪೋರ್ಟ್ ಇಂದು ಬಂದಿದ್ದು, ಸೋಂಕು ತಗುಲಿರೋದು ದೃಢಪಟ್ಟಿದೆ. ವರದಿ ಬರುವ ಮೊದಲೇ ಕುಟುಂಬಸ್ಥರು ಅಂತ್ಯಕ್ರಿಯೆ ನಡೆಸಿರುವುದು ಆತಂಕಕ್ಕೆ ಕಾರಣವಾಗಿದೆ. ಸದ್ಯ ಅಂತ್ಯ ಸಂಸ್ಕಾರದಲ್ಲಿ ಯಾರು ಭಾಗವಹಿಸಿದ್ದರು ಎಂಬ ಮಾಹಿತಿಯನ್ನು ಆರೋಗ್ಯಾಧಿಕಾರಿಗಳು ಕಲೆ ಹಾಕುತ್ತಿದ್ದಾರೆ.