ಬೆಂಗಳೂರು, ಮೇ 24: ಬೆಂಗಳೂರಿನಲ್ಲಿ ಬಿರುಗಾಳಿ, ಆಲಿಕಲ್ಲಿನಿಂದ ಕೂಡಿದ ಮಳೆ ಸುರಿಯುತ್ತಿದೆ.
ನಗರದ ಬಹುತೇಕ ಕಡೆಯಲ್ಲಿ ಭಾರಿ ಮಳೆಯಾಗುತ್ತಿದೆ. ಹೊಸಕೆರೆಹಳ್ಳಿ, ಪದ್ಮನಾಭನಗರ, ಮಲ್ಲೇಶ್ವರ, ಕೆಂಗೇರಿ, ಉತ್ತರಹಳ್ಳಿ, ಮೈಸೂರು ರಸ್ತೆ, ಜಯನಗರದಲ್ಲಿ ಮಳೆಯಾಗುತ್ತಿದೆ. ಬೆಂಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, , ಕೊಪ್ಪಳ, ರಾಯಚೂರು, ವಿಜಯಪುರ, ಶಿವಮೊಗ್ಗ, ಬಳ್ಳಾರಿ, ತುಮಕೂರು, ಮಂಡ್ಯ, ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ , ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.