Ultimate magazine theme for WordPress.

ಬ್ರದರ್ ನಾನೂ ರೈತ: ಟ್ರ್ಯಾಕ್ಟರ್ ಚಾಲನೆ ಮಾಡಿದ ಮಾಜಿ ಸಿಎಂ ಎಚ್ಡಿಕೆ

0

ರಾಮನಗರ, ಜೂನ್, 2: ಬ್ರದರ್, ನಾನೂ ರೈತ. ನಾನು ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿದ್ದೇನೆ. ಈ ಹಿಂದೆ ಹೊಲ ಉಳುಮೆ ಮಾಡುತ್ತಿದ್ದೆ ಇತ್ತೀಚಿಗೆ ಮರೆತಿದ್ದೇನೆ ಅಷ್ಟೇ ಎನ್ನುತ್ತಾ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಟ್ರ್ಯಾಕ್ಟರ್ ಚಾಲನೆ ಮಾಡಿದರು.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಸುಣ್ಣಘಟ್ಟ ಗ್ರಾಮದಲ್ಲಿ ಕೃಷಿ ಯಂತ್ರೋಪಕರಣಗಳ ಬಾಡಿಗೆ ಕೇಂದ್ರವನ್ನು ಉದ್ಘಾಟಿಸಿದ ಮಾಜಿ ಸಿಎಂ ಕುಮಾರಸ್ವಾಮಿ, ಸ್ವತಃ ತಾವೇ ಟ್ರ್ಯಾಕ್ಟರ್ ಓಡಿಸಿದರು.

ನಂತರ ಮಾತನಾಡಿದ ಮಾಜಿ ಸಿಎಂ, ನಾನು ಯಾರ ಋಣದಲ್ಲೂ ಸಿಎಂ ಆಗಿರಲಿಲ್ಲ. ಅವರೆ ನನ್ನ ಮನೆ ಬಾಗಿಲಿಗೆ ಬಂದು ನೀವೇ ಸಿಎಂ ಆಗಿ ಅಂತಾ ಕೇಳಿಕೊಂಡಿದ್ದರು. ಕೆಲ ನಾಯಕರು ರಾಮನಗರದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಹೊರಟ್ಟಿದ್ದಾರೆ ಎಂದು ಮಾಜಿ ಶಾಸಕ ಎಚ್.ಸಿ ಬಾಲಕೃಷ್ಣ ವಿರುದ್ಧ ಎಚ್ಡಿಕೆ ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಅವರನ್ನು ಸಿಎಂ ಮಾಡಿ ಕೆಲವರು ಬಾರಿ ಬೆಂಬಲ ಕೊಟ್ಟಿದ್ದರು. ಯಾರಿಂದ ಅಧಿಕಾರ ಕಳೆದುಕೊಂಡೆ ಅನ್ನೋದು ನನಗೆ ಗೊತ್ತು. ಕೆಲವರು ಕುಮಾರಸ್ವಾಮಿ ಅವರನ್ನು ಉಳಿಸಿದ್ದೇ ನಾವು ಅಂತಾ ಪ್ರಚಾರ ಪಡೆದುಕೊಂಡಿದ್ದಾರೆ ಅಂತಾನು ಗೊತ್ತು, ಇದೀಗ ನಮ್ಮ ಪಕ್ಷ ಮುಗಿಸುತ್ತೇವೆ ಎಂದು ಕೆಲವರು ಹೊರಟ್ಟಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ನಾಯಕರ ಹೆಸರೇಳದೆ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Leave A Reply

Your email address will not be published.