Ultimate magazine theme for WordPress.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್!

0

ಬೆಂಗಳೂರು, ಫೆ. 20: ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ನಡೆದಿದ್ದ ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಮಾರ್ಚ್ 5ಕ್ಕೆ ಮುಂದೂಡಿಕೆಯಾಗಿದೆ. ಅದರಿಂದಾಗಿ ಪ್ರಕರಣದ ಪ್ರಮುಖ ಆರೋಪಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ಹಾ ಪೀಠದಲ್ಲಿ ಇಂದು ಅರ್ಜಿ ವಿಚಾರಣೆ ನಡೆಯಿತು. ದೂರುದಾರ ವಕೀಲರು ಸಮಯ ಕೇಳಿದ್ದರಿಂದ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ಕಲಬುರಗಿ ಹೈಕೋರ್ಟ್ ಪೀಠದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅರ್ಜಿ ವಿಚಾರಣೆ ನಡೆಯಿತು. ಸದ್ಯ ಸಿಎಂ ಯಡಿಯೂರಪ್ಪ ಮತ್ತು ಇನ್ನಿತರರು ತಾತ್ಕಾಲಿಕವಾಗಿ ನಿರಾಳರಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಪುತ್ರ ಶರಣಗೌಡ ಅವರು ದೂರು ಸಲ್ಲಿಸಿದ್ದರು. ದೂರಿಗೆ ಸಂಬಂಧಿಸಿದಂತೆ ಆಗ ವಿಪಕ್ಷ ನಾಯಕರಾಗಿದ್ದ ಯಡಿಯೂರಪ್ಪ ಅವರು ಅಮೀಷ ಒಡ್ಡಿದ್ದನ್ನು ದೂರಿನಲ್ಲಿ ದಾಖಲಿಸಲಾಗಿತ್ತು. 2018ರ ಪೆಬ್ರವರಿಯಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲೆಯ ದೇವದುರ್ಗ ಠಾಣೆಯಲ್ಲಿ ಯಡಿಯುರಪ್ಪ ಅವರು ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಾಗಿದೆ. ಈ ಬಗ್ಗೆ ಕಲಬುರಗಿ ಹೈಕೋರ್ಟ್ ನಿಂದ ವಿಚಾರಣೆಗೆ ಸಿಎಂ ಯಡಿಯೂರಪ್ಪ ಅವರು ತಡೆ ಪಡೆದಿದ್ದರು. ನಂತರ ಪ್ರಕರಣ ಜನಪ್ರತಿನಿಧಿಗಳ ನ್ಯಾಯಾಲಯಕ್ಕ ವರ್ಗಾವಣೆಯಾಗಿತ್ತು.

Leave A Reply

Your email address will not be published.