Ultimate magazine theme for WordPress.

ರಸ್ತೆ ಬದಿ ವ್ಯಾಪಾರಿಗಳು, ವಲಸೆ ಕಾರ್ಮಿಕರು, ಸಣ್ಣ ರೈತರಿಗೆ ವಿಶೇಷ ಸವಲತ್ತು; ಸಚಿವೆ ನಿರ್ಮಲಾ ಸೀತಾರಾಮನ್

0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದ 20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ಬಗ್ಗೆ ನಿನ್ನೆಯಷ್ಟೇ ಮೊದಲ ಹಂತದ ವಿವರಣೆ ನೀಡಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಇಂದು ಮತ್ತೆ ಎರಡನೇ ಹಂತದ ಬಗ್ಗೆ ವಿವರಣೆ ನೀಡಿದರು.

ಸಂಜೆ 4 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ರಸ್ತೆ ಬದಿ ವ್ಯಾಪಾರಿಗಳು, ವಲಸೆ ಕಾರ್ಮಿಕರು, ಸಣ್ಣ ರೈತರು, ಸಣ್ಣ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ಈ ಪ್ಯಾಕೇಜ್​ನಲ್ಲಿ ವಿಶೇಷ ಸವಲತ್ತುಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

ಇಂದು 9 ಪ್ರಮುಖ ನಿರ್ಧಾರಗಳನ್ನು ಘೋಷಿಸಲಾಗುವುದು. ಅದರಲ್ಲಿ ಮೂರು ವಲಸೆ ಕಾರ್ಮಿಕರಿಗೆ, ಒಂದು ಮುದ್ರಾದೊಂದಿಗೆ ಶಿಶು ಸಾಲ, ಮತ್ತೊಂದು ರಸ್ತೆ ಬದಿಯ ವ್ಯಾಪಾರಿಗಳಿಗೆ, ಮತ್ತೊಂದು ಗೃಹ, 1 ಬುಡಕಟ್ಟು ಜನಾಂಗದ ಉದ್ಯೋಗ ಪೀಳಿಗೆಗೆ ಹಾಗೂ ಎರಡು ನಿರ್ಧಾರಗಳು ಸಣ್ಣ ರೈತರನ್ನು ಒಳಗೊಂಡಿದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾಹಿತಿ ನೀಡಿದರು.

Leave A Reply

Your email address will not be published.