ಬೆಂಗಳೂರು(ಮೇ.10): ರಾಜ್ಯದಲ್ಲಿ ಕೊರೋನಾ ನಿಂತ್ರಿಸುವುದು ಹೇಗೆ? ಎನ್ನುವುದರ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಚಿವರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಈಗ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸುತ್ತಿರುವ ಯಡಿಯೂರಪ್ಪ ಮುಂದಿನ ಕ್ರಮಗಳ ಕುರಿತಾಗಿ ಮಹತ್ವದ ಮಾತುಕತೆ ಮಾಡುತ್ತಿದ್ದಾರೆ.
ಸಿಎಂ ಬಿ.ಎಸ್ ಯಡಿಯೂರಪ್ಪ ಕರೆದ ಸಭೆಯಲ್ಲಿ ಸಚಿವರಾದ ಸುರೇಶ್ ಕುಮಾರ್. ಆರ್ ಅಶೋಕ್, ಸುಧಾಕರ್ ಅಶ್ವತ್ಥ್ ನಾರಾಯಣ ಹಾಗೂ ಗೋವಿಂದ್ ಕಾರಜೋಳ್ ಭಾಗಿಯಾಗಿದ್ದಾರೆ. ಮುಂದೆ ಕೊರೋನಾ ತಹಬದಿಗೆ ತರಲು ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತಾಗಿ ಸಿಎಂ ಸಂಪುಟ ಸಹೋದ್ಯೋಗಿಗಳ ಜೊತೆಗೆ ಚರ್ಚೆ ನಡೆಸುತ್ತಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯರವು ಎಲ್ಲಾ ರಾಜ್ಯಗಳ ಸಭೆ ಕರೆದಿದ್ಧಾರೆ. ದೇಶದ್ಯಾಂತ ಜಾರಿಯಲ್ಲಿರುವ 3ನೇ ಹಂತದ ಲಾಕ್ಡೌನ್ ಮೇ 17ನೇ ತಾರೀಕಿಗೆ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ನಾಳೆ ಸೋಮವಾರ ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಈ ವೇಳೆ ಕೊರೋನಾ ನಿತಂತ್ರಣಕ್ಕಾಗಿ ನಾಲ್ಕನೇ ಬಾರಿಗೆ ಲಾಕ್ಡೌನ್ ಮುಂದುವರಿಸುವ ಬಗ್ಗೆ ಚರ್ಚೆ ನಡೆಯಲಿದೆ.