ಬೆಂಗಳೂರು, ಮೇ 26 : ರಾಜ್ಯಸಭೆ ಚುನಾವಣೆಯ ವಿಚಾರದಲ್ಲಿ ಕರ್ನಾಟಕದಿಂದ ಬ್ರೇಕಿಂಗ್ ನ್ಯೂಸ್ ಒಂದು ಹೊರಬಂದಿದೆ. ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ಮಾಡಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ರಾಜ್ಯಸಭೆ ಚುನಾವಣೆಯಲ್ಲಿ ಕೈ ಜೋಡಿಸಲಿವೆ.
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಒಬ್ಬರು ಸದಸ್ಯರನ್ನು ಆಯ್ಕೆ ಮಾಡಲು ಜೂನ್ನಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದ್ದು, ಕಾಂಗ್ರೆಸ್ ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಲಿದ್ದಾರೆ ಎಂಬದು ಸುದ್ದಿ.
ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಕಣಕ್ಕಿಳಿಯಲಿದ್ದಾರೆ ಎಂಬುದು ಸುದ್ದಿ. ಕೆಲವು ದಿನಗಳ ಹಿಂದೆ ದೇವೇಗೌಡರ ಮನೆಯಲ್ಲಿ ನಡೆದ ರಹಸ್ಯ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಹಾಸನ ಬಿಟ್ಟು ತುಮಕೂರಿಗೆ ಬಂದು ಕಣಕ್ಕಿಳಿದಿದ್ದ ದೇವೇಗೌಡರು ಸೋಲು ಕಂಡಿದ್ದರು. ಈಗ ರಾಜ್ಯಸಭೆ ಮೂಲಕ ಪುನಃ ರಾಷ್ಟ್ರ ರಾಜಕೀಯಕ್ಕೆ ಹೋಗಲಿದ್ದಾರೆಯೇ? ಕಾದು ನೋಡಬೇಕು.