ಬೆಂಗಳೂರು, ಜೂನ್ 09 : ಲಾಕ್ ಡೌನ್ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಇಳಿಕೆಯಾಗಿದೆ. ಆದರೆ, ಎರಡು ತಿಂಗಳಿನಲ್ಲಿ 11 ಪಾದಚಾರಿಗಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ ಪ್ರತಿ ವರ್ಷ ಸುಮಾರು 300 ಪಾದಚಾರಿಗಳು ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಾರೆ. ಈ ವರ್ಷ ಲಾಕ್ ಡೌನ್ ಜಾರಿಯಲ್ಲಿದ್ದ ಕಾರಣ ಎರಡು ತಿಂಗಳಿನಲ್ಲಿ 11 ಜನರು ಸಾವನ್ನಪ್ಪಿದ್ದಾರೆ.
ಏಪ್ರಿಲ್ನಲ್ಲಿ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಯಲ್ಲಿದ್ದಾಗ ಇಬ್ಬರು ಪಾದಚಾರಿಗಳು ನಗರದಲ್ಲಿ ಮೃತಪಟ್ಟಿದ್ದಾರೆ. ಮೇ ತಿಂಗಳಿನಲ್ಲಿ ಕೆಲವು ವಿನಾಯಿತಿ ನೀಡಿದ ಬಳಿಕ ವಾಹನ ಸಂಚಾರ ಹೆಚ್ಚಾಯಿತು 9 ಜನರು ಮೃತಪಟ್ಟರು.