Ultimate magazine theme for WordPress.

2ನೇ ಹಂತದಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುತ್ತಾರಾ ಪ್ರಧಾನಿ ಮೋದಿ?

0

ನವದೆಹಲಿ, ಜನವರಿ.21: ಕೊರೊನಾವೈರಸ್ ಲಸಿಕೆ ಬಗ್ಗೆ ವೈದ್ಯಕೀಯ ಸಿಬ್ಬಂದಿ ಹಾಗೂ ದೇಶದ ಜನರಲ್ಲಿ ಉಂಟಾಗಿರುವ ಆತಂಕ ಹೋಗಲಾಡಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಎರಡನೇ ಹಂತದ ಕೊವಿಡ್-19 ಲಸಿಕೆ ಅಭಿಯಾನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಚಿವರು, ಶಾಸಕರು ಮತ್ತು ಸಂಸದರು ಲಸಿಕೆ ಹಾಕಿಸಿಕೊಳ್ಳಲಿದ್ದಾರೆ. 50 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಜನಪ್ರತಿನಿಧಿಗಳಿಗೆ ಲಸಿಕೆ ನೀಡುವುದಕ್ಕೆ ತೀರ್ಮಾನಿಸಲಾಗಿದೆ.

ಮೊದಲ ಹಂತದಲ್ಲಿ ದೇಶದ 3 ಕೋಟಿ ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಕೊವಿಶೀಲ್ಡ್ ಅಥವಾ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡುವ ಗುರಿ ಹೊಂದಲಾಗಿದೆ. ಎರಡನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟ 27 ಕೋಟಿ ಜನರಿಗೆ ಲಸಿಕೆ ನೀಡುವ ಉದ್ದೇಶ ಹೊಂದಲಾಗಿದೆ. ಈ 27 ಕೋಟಿ ಜನರಲ್ಲಿ ಕೇಂದ್ರ ಸಚಿವರು, ಸಂಸದರು ಮತ್ತು 50 ವರ್ಷಕ್ಕಿಂತ ಮೇಲ್ಪಟ್ಟ ಶಾಸಕರಿಗೂ ಕೂಡಾ ಲಸಿಕೆ ಹಾಕಿಸಿಕೊಳ್ಳುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.

Leave A Reply

Your email address will not be published.