ಯಾದಗಿರಿ, ಜೂನ್.05: ನೊವೆಲ್ ಕೊರೊನಾ ವೈರಸ್ ಹರಡುವಿಕೆ ಭೀತಿ ನಡುವೆಯೂ ಜಿಲ್ಲಾಡಳಿತ ತೋರಿದ ನಿರ್ಲಕ್ಷ್ಯವು ಇಂದು ಜಿಲ್ಲಾದ್ಯಂತ ಜನರು ಆತಂಕದಲ್ಲೇ ದಿನ ಕಳೆಯುವಂತಾ ಪರಿಸ್ಥಿತಿ ನಿರ್ಮಾಣವಾಗಿ ಬಿಟ್ಟಿದೆ.
ಸರ್ಕಾರಿ ಕ್ವಾರೆಂಟೈನ್ ಕೇಂದ್ರದಲ್ಲಿದ್ದ 23 ಜನರನ್ನು ಇತ್ತೀಚಿಗಷ್ಟೇ ಯಾದಗಿರಿ ಜಿಲ್ಲಾಡಳಿತವು ಬಿಡುಗಡೆ ಮಾಡಿತ್ತು. ಹಾಗೆ ಬಿಡುಗಡೆಯಾದ 23 ಮಂದಿಗೆ ಕೊರೊನಾ ವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.
ಕೊರೊನಾ ವೈರಸ್ ಸೋಂಕು ತಗಲಿರುವ ಬಗ್ಗೆ ಶಂಕೆ ಹಿನ್ನೆಲೆಯಲ್ಲಿ ಕ್ವಾರೆಂಟೈನ್ ನಲ್ಲಿದ್ದ ಶಂಕಿತರ ರಕ್ತ ಹಾಗೂ ಗಂಟಲು ಮಾದರಿಯನ್ನು ಸಂಗ್ರಹಿಸಿ ವೈದ್ಯಕೀಯ ತಪಾಸಣೆಗೆ ಕಳುಹಿಸಿ ಕೊಡಲಾಗಿತ್ತು. ಆದರೆ ವರದಿ ಮುನ್ನವೇ 23 ಜನರನ್ನು ಬಿಡುಗಡೆ ಮಾಡಿದ್ದು ಜಿಲ್ಲಾಡಳಿತದ ಯಡವಟ್ಟಿಗೆ ಹಿಡಿದ ಕೈಗನ್ನಡಯಾಗಿದೆ.
ಮಹಾರಾಷ್ಟ್ರದಿಂದ ಯಾದಗಿರಿಗೆ ಆಗಮಿಸಿದ ಎಲ್ಲ ವಲಸಿಗರನ್ನು ಕ್ವಾರೆಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಇತ್ತೀಚಿಗಷ್ಟೇ 23 ಮಂದಿ ಬಿಡುಗಡೆಯಾಗಿ ಮನೆಗೆ ತೆರಳಿದ್ದು 16 ಜನರನ್ನಷ್ಟೇ ಸರ್ಕಾರಿ ಕ್ವಾರೆಂಟೈನ್ ಕೇಂದ್ರದಲ್ಲಿ ಇರಿಸಿಕೊಂಡಿದ್ದು, ಉಳಿದವರು ಹೋಮ್ ಕ್ವಾರೆಂಟೈನ್ ನಲ್ಲಿ ಇರುವಂತೆ ಸೂಚನೆ ನೀಡಲಾಗಿತ್ತು.