Ultimate magazine theme for WordPress.

4 ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ: ನೌಕರರ ತೀವ್ರ ವಿರೋಧ

0

ಫೆಬ್ರವರಿ 1ರಂದು ಕೇಂದ್ರ ಬಜೆಟ್‌ನಲ್ಲಿ ಎರಡು ಸಾರ್ವಜನಿಕ ರಂಗದ ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದರು. ಇದೀಗ ಎರಡು ಬ್ಯಾಂಕ್‌ಗಳ ಬದಲು ನಾಲ್ಕು ಬ್ಯಾಂಕ್‌ಗಳನ್ನು ಖಾಸಗೀಕರಣಕ್ಕೆ ಆಯ್ಕೆ ಮಾಡಿದೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಬ್ಯಾಂಕ್‌ ಆಫ್‌ ಇಂಡಿಯಾ, ಬ್ಯಾಂಕ್‌ ಆಫ್‌ ಮಹಾರಾಷ್ಟ್ರ, ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌, ಸೆಂಟ್ರಲ್‌ ಬ್ಯಾಂಕ್ ಆಫ್‌ ಇಂಡಿಯಾವನ್ನು ಸರ್ಕಾರವನ್ನು ಆಯ್ಕೆ ಮಾಡಿದೆ. ಈ ಬ್ಯಾಂಕ್‌ಗಳಲ್ಲಿ ಎರಡು ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡಿ ಬೊಕ್ಕಸ ತುಂಬಿಸಿಕೊಳ್ಳುವುದು ಸರ್ಕಾರದ ಉದ್ದೇಶವಾಗಿದೆ ಎನ್ನಲಾಗಿದೆ.
ಮೊದಲ ಹಂತದ ಖಾಸಗೀಕರಣದಲ್ಲಿ ಮಧ್ಯಮ ಹಾಗೂ ಸಣ್ಣ ಗಾತ್ರದ ಬ್ಯಾಂಕ್‌ಗಳನ್ನು ಖಾಸಗೀಕರಣ ಮಾಡಲು ಕೇಂದ್ರ ಸರಕಾರ ಉದ್ದೇಶಿಸಿದೆ. ಮುಂದಿನ ವರ್ಷಗಳಲ್ಲಿ ದೊಡ್ಡ ಬ್ಯಾಂಕ್‌ಗಳಿಗೂ ಸರಕಾರ ಕೈ ಹಾಕಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಲು ಹಣಕಾಸು ಇಲಾಖೆ ವಕ್ತಾರರು ನಿರಾಕರಿಸಿದ್ದಾರೆ.

ಇನ್ನು ಸಾರ್ವಜನಿಕ ವಲಯಗಳ ಖಾಸಗೀಕರಣಕ್ಕೆ ಈಗಾಗಲೇ ಬ್ಯಾಂಕ್ ಸಿಬ್ಬಂದಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿದ್ದಾರೆ.

Leave A Reply

Your email address will not be published.