EBM News Kannada
Leading News Portal in Kannada

ಮಣಿಪುರ ವಿಷಯದಲ್ಲಿ ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡು: ಲೋಕಸಭೆಯಲ್ಲಿ ವಿಪಕ್ಷಗಳ ವಿರುದ್ಧ ಅಮಿತ್ ಶಾ ವಾಗ್ದಾಳಿ – Kannada News | No Confidence Motion debate Union Home Minister,Amit Shah Slams Opposition in Lok Sabha

0


No Confidence Motion: ಪ್ರಧಾನಿ ಮೋದಿ ಈಶಾನ್ಯ ರಾಜ್ಯಗಳನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಿದ್ದಾರೆ. 15 ವರ್ಷಗಳ ಕಾಲ ಪ್ರಧಾನಿಯಾಗಿರುವ ವ್ಯಕ್ತಿಗಳಿದ್ದಾರೆ. ಅವರಿಂದಾಗಿ ನಾನು ಮುಜುಗರಕ್ಕೊಳಗಾಗಿದ್ದೇನೆ. ಆದರೆ, ಕಳೆದ 9 ವರ್ಷಗಳಲ್ಲಿ ಮೋದಿ 50ಕ್ಕೂ ಹೆಚ್ಚು ಬಾರಿ ಈಶಾನ್ಯಕ್ಕೆ ಭೇಟಿ ನೀಡಿದ್ದಾರೆ. ಇದು ಈಶಾನ್ಯ ಭಾರತದ ಅವಿಭಾಜ್ಯ ಅಂಗ ಎಂಬುದನ್ನು ತೋರಿಸುತ್ತದೆ ಎಂದು ಲೋಕಸಭೆಯಲ್ಲಿ ಮಾತನಾಡಿದ ಅಮಿತ್ ಶಾ ಹೇಳಿದ್ದಾರೆ.

ದೆಹಲಿ ಆಗಸ್ಟ್ 09:ಲೋಕಸಭೆಯಲ್ಲಿ (Lok Sabha) ಅವಿಶ್ವಾಸ ಗೊತ್ತುವಳಿ ಚರ್ಚೆಗೆ (No-Confidence Motion) ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) , ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ಪ್ರಧಾನಿ ನರೇಂದ್ರ ಮೋದಿ ಅತ್ಯಂತ ವಿಶ್ವಾಸಾರ್ಹ ಪ್ರಧಾನಿಯಾಗಿದ್ದಾರೆ ಎಂದು ಹೇಳಿದ್ದಾರೆ. ಅವಿಶ್ವಾಸ ನಿರ್ಣಯದ 2ನೇ ದಿನವಾದ ಬುಧವಾರ ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭಾಷಣ ಮಾಡಿದ್ದು, ಇದಾದ ಕೆಲವೇ ನಿಮಿಷಗಳಲ್ಲಿ ಬಿಜೆಪಿಯ ಸ್ಮೃತಿ ಇರಾನಿ, ರಾಹುಲ್ ಭಾಷಣಕ್ಕೆ ಪ್ರತಿಕ್ರಿಯಿಸಿದ್ದಾರೆ.ಪ್ರತಿಪಕ್ಷಗಳು ಸರ್ಕಾರವನ್ನು ಟೀಕಿಸಿದರೆ, ಎನ್‌ಡಿಎ ಸರ್ಕಾರವು “ಅಸಮರ್ಪಕ ಮತ್ತು ಸೂಕ್ತವಲ್ಲದ ಸಮಯದಲ್ಲಿ ನಿರ್ಣಯ ಮಂಡಿಸಿದ್ದಕ್ಕಾಗಿ ಪ್ರತಿಪಕ್ಷಗಳ ಒಕ್ಕೂಟವಾದ ಇಂಡಿಯಾ ಮತ್ತು ಕಾಂಗ್ರೆಸ್‌ಗೆ ಛೀಮಾರಿ ಹಾಕಿದೆ.

ಅವಿಶ್ವಾಸ ನಿರ್ಣಯದ ಚರ್ಚೆಯ ವೇಳೆ ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಣಿಪುರ ವಿಷಯವನ್ನು ಉದ್ದೇಶಿಸಿ ಮಾತನಾಡುತ್ತಾ, “ಅಲ್ಲಿ ಹಿಂಸಾಚಾರ ಸಂಭವಿಸಿದೆ ಎಂಬುದನ್ನು ನಾನು ಒಪ್ಪುತ್ತೇನೆ ಅದನ್ನು ಯಾರೂ ಅಲ್ಲಗಳೆಯಲು ಸಾಧ್ಯವಿಲ್ಲ. ಆದರೆ, ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ನೀವು ಅದನ್ನು ರಾಜಕೀಯ ತಂತ್ರಗಾರಿಕೆಯಲ್ಲಿ ಬಳಸುತ್ತಿದ್ದೀರಿ ಎಂದು ವಿಪಕ್ಷಗಳ ವಿರುದ್ಧ ಗುಡುಗಿದ್ದಾರೆ.

ಪ್ರಧಾನಿ ಮೋದಿ ಈಶಾನ್ಯ ರಾಜ್ಯಗಳನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಿದ್ದಾರೆ. 15 ವರ್ಷಗಳ ಕಾಲ ಪ್ರಧಾನಿಯಾಗಿರುವ ವ್ಯಕ್ತಿಗಳಿದ್ದಾರೆ. ಅವರಿಂದಾಗಿ ನಾನು ಮುಜುಗರಕ್ಕೊಳಗಾಗಿದ್ದೇನೆ. ಆದರೆ, ಕಳೆದ 9 ವರ್ಷಗಳಲ್ಲಿ ಮೋದಿ 50ಕ್ಕೂ ಹೆಚ್ಚು ಬಾರಿ ಈಶಾನ್ಯಕ್ಕೆ ಭೇಟಿ ನೀಡಿದ್ದಾರೆ. ಇದು ಈಶಾನ್ಯ ಭಾರತದ ಅವಿಭಾಜ್ಯ ಅಂಗ ಎಂಬುದನ್ನು ತೋರಿಸುತ್ತದೆ ಎಂದು ಶಾ ಹೇಳಿದ್ದಾರೆ.

ತಾಜಾ ಸುದ್ದಿ



Leave A Reply

Your email address will not be published.