EBM News Kannada
Leading News Portal in Kannada

ಕರ್ನಾಟಕದಿಂದ ತಮಿಳುನಾಡಿಗೆ 10 ಟಿಎಂಸಿ ನೀರು ಬಿಡುಗಡೆ: ಡಿಸಿಎಂ ಡಿ.ಕೆ.ಶಿವಕುಮಾರ್

0


ಬೆಂಗಳೂರು, ಆ.15: ಮಳೆ ಕೈಕೊಟ್ಟ ಇಂತಹ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸಲು ಮೇಕೆದಾಟು ಯೋಜನೆ ನೆರವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಬೇಕು ಎಂದು ತಮಿಳುನಾಡಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು.

ಮಂಗಳವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ತಮಿಳುನಾಡಿಗೆ 10 ಟಿಎಂಸಿ ನೀರನ್ನು ನೀಡಲು ತಯಾರಿದ್ದೇವೆ. ನಾವು ಈಗ ಎಷ್ಟು ನೀರು ಲಭ್ಯವಿದೆಯೊ ಅಷ್ಟು ನೀರನ್ನು ಕೊಟ್ಟಿದ್ದೇವೆ. ನಮ್ಮ ರೈತರಿಗೂ ನೀರನ್ನು ಕೊಟ್ಟಿದ್ದೇವೆ ಎಂದರು.

ನೀರು ಹಂಚಿಕೆ ವಿಚಾರವಾಗಿ ಯಾವುದೇ ಗದ್ದಲ ಬೇಡ, ಮಳೆ ಬಂದರೆ ಖಂಡಿತವಾಗಿ ನೀರನ್ನು ಕೊಡುತ್ತೇವೆ. ಕಳೆದ ಬಾರಿ 400 ಟಿಎಂಸಿ ನೀರು ಸಮುದ್ರಕ್ಕೆ ಸೇರಿದೆ, ಗೊಂದಲಕ್ಕೆ ಅವಕಾಶ ಬೇಡ ಎಂದು ತಮಿಳುನಾಡಿಗೆ ನಾವು ಮನವಿ ಮಾಡಿಕೊಳ್ಳುತ್ತೇವೆ. ಮೇಕೆದಾಟು ಯೋಜನೆ ಜಾರಿ ವಿಚಾರಕ್ಕೂ ನೀವು ಸಹಕಾರ ನೀಡುತ್ತಿಲ್ಲ. ಈ ರೀತಿಯ ಸಂಕಷ್ಟದ ಕಾಲದಲ್ಲಿ ಮೇಕೆದಾಟು ಯೋಜನೆ ನಿಮ್ಮ ಉಪಯೋಗಕ್ಕೆ ಬರುತ್ತದೆ ಎಂದು ಶಿವಕುಮಾರ್ ಹೇಳಿದರು.

Leave A Reply

Your email address will not be published.