ಬೆಂಗಳೂರು: ‘ಭಾರತೀಯ ಕ್ರಿಕೆಟ್ ನಲ್ಲಿ ಮೀಸಲಾತಿ ಅಗತ್ಯವಿದೆ’ ಎಂದು ಸಾಮಾಜಿಕ ಹೋರಾಟಗಾರ, ನಟ ಚೇತನ್ ಅಹಿಂಸಾ ಪ್ರತಿಪಾದಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಚೇತನ್, ”ನಾನು ಮತ್ತೆ ಹೇಳುತಿದ್ದೇನೆ, ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿ ಅಗತ್ಯವಿದೆ. ಭಾರತಕ್ಕೆ ಕ್ರಿಕೆಟ್‌ನಲ್ಲಿ ಮೀಸಲಾತಿ ಇದ್ದಿದ್ದರೆ ಭಾರತ ಸುಲಭವಾಗಿ ಈ ವಿಶ್ವ ಕಪ್ಪನ್ನು ಗೆಲ್ಲುತ್ತಿತ್ತು” ಎಂದಿದ್ದಾರೆ.
ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರವಿವಾರ ನಡೆದ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ 7ವಿಕೆಟ್ ಗಳ ಹೀನಾಯ ಸೋಲು ಕಂಡಿತ್ತು. 6ನೇ ಬಾರಿಗೆ ಆಸ್ಟ್ರೇಲಿಯಾ ಚಾಂಪಿಯನ್ ಪಟ್ಟಕ್ಕೇರಿತು.