EBM News Kannada
Leading News Portal in Kannada

ಅಮೆರಿಕ: ವಿವಿಯಲ್ಲಿ ಗುಂಡಿನ ದಾಳಿ: 3 ಮಂದಿ ಮೃತ್ಯು

0



ವಾಷಿಂಗ್ಟನ್ : ಅಮೆರಿಕದ ನೆವಾಡಾ ಲಾಸ್‍ವೆಗಾಸ್ ವಿಶ್ವವಿದ್ಯಾಲಯದಲ್ಲಿ ಬುಧವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಮೃತಪಟ್ಟಿದ್ದು ಒಬ್ಬ ಗಾಯಗೊಂಡಿದ್ದಾನೆ.

ಗುಂಡಿನ ದಾಳಿ ನಡೆಸಿ ಪರಾರಿಯಾದ ಆರೋಪಿಯನ್ನು ಬಳಿಕ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿರುವುದಾಗಿ ವರದಿಯಾಗಿದೆ. ಸಂಜೆ 5 ಗಂಟೆ ವೇಳೆಗೆ ವಿವಿ ಕ್ಯಾಂಪಸ್‍ಗೆ ನುಗ್ಗಿದ ಬಂದೂಕುಧಾರಿ ಮನಬಂದಂತೆ ಗುಂಡು ಹಾರಿಸಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಬಳಿಕ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಆರೋಪಿ ಪ್ರೊಫೆಸರ್ ಆಗಿದ್ದು ಈ ಹಿಂದೆ ವಿವಿಯಲ್ಲಿ ಉದ್ಯೋಗಕ್ಕೆ ಈತ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಲಾಗಿತ್ತು. ಆ ದ್ವೇಷದಿಂದ ಗುಂಡಿನ ದಾಳಿ ನಡೆಸಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Leave A Reply

Your email address will not be published.