ಹೊಸದಿಲ್ಲಿ: ಕೇಂದ್ರ ಚುನಾವಣಾ ಸಮಿತಿಯ ಸಭೆಯ ನಂತರ ಮುಂಬರುವ ಲೋಕಸಭಾ ಚುನಾವಣೆಗೆ ಶನಿವಾರ ಕಾಂಗ್ರೆಸ್ ಪಕ್ಷವು 16 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮನೀಶ್ ತಿವಾರಿ ಚಂಡೀಗಢದಿಂದ ಸ್ಪರ್ಧಿಸುತ್ತಿದ್ದರೆ, ವಿಕ್ರಮಾದಿತ್ಯ ಸಿಂಗ್ ಅವರು ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆ.
ವಿಕ್ರಮಾದಿತ್ಯ ಸಿಂಗ್ ಹಿಮಾಚಲ ಪ್ರದೇಶ ಕಾಂಗ್ರೆಸ್ ಘಟಕದ ಮುಖ್ಯಸ್ಥೆ ಪ್ರತಿಭಾ ಸಿಂಗ್ ಅವರ ಪುತ್ರರಾಗಿದ್ದಾರೆ.
ಶನಿವಾರ ಸಂಜೆ ಇಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯ ನಂತರ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.
कांग्रेस अध्यक्ष श्री @kharge की अध्यक्षता में आयोजित ‘केंद्रीय चुनाव समिति’ की बैठक में लोकसभा चुनाव, 2024 के लिए कांग्रेस उम्मीदवारों के नाम की लिस्ट। pic.twitter.com/nh9v8MTVjf
— Congress (@INCIndia) April 13, 2024