‘CM ಸಿದ್ದರಾಮಯ್ಯ’ ಯಾಕೆ ರಾಜೀನಾಮೆ ಕೊಡಬೇಕು..? ಕುಮಾರಸ್ವಾಮಿ ಕೊಡ್ತಾರಾ : ಜಿ.ಟಿ ದೇವೇಗೌಡ ಪ್ರಶ್ನೆ | Kannada Dunia | Kannada News | Karnataka News
03-10-2024 12:37PM IST
/
No Comments /
Posted In: Karnataka, Latest News, Live News
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು..? ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರಾ ಎಂದು ಜಿ.ಟಿ ದೇವೇಗೌಡ ಸಿಎಂ ಪರ ಬ್ಯಾಟ್ ಬೀಸಿದ್ದಾರೆ.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ 2 ಲಕ್ಷ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಕುಮಾರಸ್ವಾಮಿ ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಹಾಗೆಯೇ ಸಿಎಂ ಸಿದ್ದರಾಮಯ್ಯ ಸಹ ರಾಜೀನಾಮೆ ಕೊಡುವ ಅಗತ್ಯ ಇಲ್ಲ ಎಂದರು.
ಸಿಎಂ ರಾಜೀನಾಮೆ ನೀಡಬೇಕೆಂದು ಕೇಳುತ್ತಾ ಹೋದರೆ ರಾಜ್ಯದಲ್ಲಿ ಎಲ್ಲ ರಾಜಕೀಯ ನಾಯಕರೂ ರಾಜೀನಾಮೆ ನೀಡಬೇಕಾದೀತು. ಎಲ್ಲದಕ್ಕೂ ಸಿಎಂ ಸಿದ್ದರಾಮಯ್ಯ ಕಾರಣ ಅಲ್ಲ. ಕಾನೂನುಬದ್ಧವಾಗಿ 50:50 ಅನುಪಾತದಲ್ಲಿ ಸೈಟ್ ಹಂಚಿಕೆ ಮಾಡಲಾಗಿದೆ ಎಂದರು.