ಬೆಂಗಳೂರು: ನಗರದ ಪೀಣ್ಯದಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನ ಮೂಲದ ಮೂವರನ್ನು ಜಿಗಣಿಯಲ್ಲಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಇತ್ತೀಚೆಗೆ ಐದಕ್ಕೂ ಹೆಚ್ಚು ಮಂದಿ ಪಾಕಿಸ್ತಾನ ಪ್ರಜೆಗಳನ್ನು ಬಂಧಿಸಿದ್ದ ಪೊಲೀಸರು, ಅವರನ್ನು ತನಿಖೆಗೆ ಒಳಪಡಿಸಿದಾಗ ತಿಳಿದುಬಂದ ಮಾಹಿತಿ ಮೇರೆಗೆ ಇದೀಗ ಪೀಣ್ಯದಲ್ಲಿ ವಾಸವಿದ್ದ ಪಾಕಿಸ್ತಾನ ಮೂಲದ ದಂಪತಿ ಹಾಗೂ ಓರ್ವ ಮಗುವನ್ನು ಬಂಧಿಸಿದ್ದು, ಸದ್ಯ ಅವರನ್ನು ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಠಾಣೆಗೆ ಕರೆದೊಯ್ದಿರುವುದಾಗಿ ಎಂದು ತಿಳಿದುಬಂದಿದೆ.
ಬಂಧಿತ ಪಾಕಿಸ್ತಾನ ಪ್ರಜೆಗಳ ವಿಚಾರಣೆ ಮುಂದುವರೆದಿದ್ದು, ಪಾಕಿಸ್ತಾನದಿಂದ 15ಕ್ಕೂ ಹೆಚ್ಚು ಮಂದಿ ಭಾರತಕ್ಕೆ ಅಕ್ರಮವಾಗಿ ನುಸುಳಿ ಬಂದಿರುವುದಾಗಿ ಗೊತ್ತಾಗಿದೆ. ಈ ಬಗ್ಗೆ ತನಿಖೆಯನ್ನು ತೀವ್ರಗೊಳಿಸಿ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.