EBM News Kannada
Leading News Portal in Kannada

ಕೋವಿಡ್ ಹಗರಣ | ಡಿ.ಕೆ.ಶಿ​ವಕುಮಾರ್ ನೇತೃತ್ವದ ಸಂಪುಟ ಉಪ ಸಮಿತಿ ರಚನೆ

0



ಬೆಂಗಳೂರು : ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್-19 ಹಗರಣದ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ.ಕುನ್ಹಾ ನೇತೃತ್ವದ ಆಯೋಗವು ನೀಡಿದ್ದ ವರದಿಯನ್ನು ಆಧರಿಸಿ ಪರಿಶೀಲನೆ ನಡೆಸಿ, ಕ್ರಮ ಕೈಗೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಂಪುಟ ಉಪಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.

ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದು, ಕೋವಿಡ್ ಸಂದರ್ಭದಲ್ಲಿ ಔಷಧ ಮತ್ತು ಉಪಕರಣ ಖರೀದಿಯಲ್ಲಿ 769 ಕೋಟಿ ರೂ. ಅಕ್ರಮ ನಡೆದಿದೆ ಎಂದು ಆಯೋಗವು ಇತ್ತೀಚೆಗೆ ವರದಿ ನೀಡಿತ್ತು.

ಡಿ.ಕೆ. ಶಿವಕುಮಾರ್‌ ಅಧ್ಯಕ್ಷತೆಯ ಈ ಸಮಿತಿಯು ಸಚಿವರಾದ ಜಿ.ಪರಮೇಶ್ವರ್​​, ಎಚ್​​​.ಕೆ ಪಾಟೀಲ್, ದಿನೇಶ್ ಗುಂಡೂರಾವ್, ಪ್ರಿಯಾಂಕ್​ ಖರ್ಗೆ, ಸಂತೋಷ್​​​ ಲಾಡ್​​​​​​​ ಹಾಗೂ ಶರಣ ಪ್ರಕಾಶ್ ಪಾಟೀಲ ಅವರನ್ನು ಒಳಗೊಂಡಿದೆ.

Leave A Reply

Your email address will not be published.