ಇಂದು ‘ಸಿಎಂ ಸಿದ್ದರಾಮಯ್ಯ’ ಬಳ್ಳಾರಿ ಪ್ರವಾಸ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ.! | Kannada Dunia | Kannada News | Karnataka News
14-10-2024 8:07AM IST
/
No Comments /
Posted In: Karnataka, Latest News, Live News
ಬಳ್ಳಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ.14 ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಅ.14 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟು ಬೆಳಿಗ್ಗೆ 10.50 ಗಂಟೆಗೆ ತೋರಣಗಲ್ಲಿನ ಜಿಂದಾಲ್ ಏರ್ಸ್ಟ್ರಿಪ್ ಗೆ ಆಗಮಿಸುವರು.
ಬಳಿಕ ಮುಖ್ಯಮಂತ್ರಿಗಳು ಬೆಳಿಗ್ಗೆ 11.15 ಗಂಟೆಗೆ ಸಂಡೂರಿಗೆ ಆಗಮಿಸಿ, ಬಳ್ಳಾರಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಇವರ ವತಿಯಿಂದ ಸಂಡೂರು ಪಟ್ಟಣದ ಅಗ್ನಿಶಾಮಕದಳ ಮುಂಭಾಗದ ವಿಶ್ವಾಸ್ ಯು.ಲಾಡ್ ಮೈದಾನದ ಆವರಣದಲ್ಲಿ ಆಯೋಜಿಸಿರುವ ಸಂಡೂರು ತಾಲ್ಲೂಕಿನ ಸಾಧನಾ ಸಮಾವೇಶ, ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ವಿವಿಧ ಯೋಜನೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮುಖ್ಯಮಂತ್ರಿಗಳು ಅದೇ ದಿನ ಮಧ್ಯಾಹ್ನ 03.55 ಗಂಟೆಗೆ ತೋರಣಗsಲ್ಲಿಗೆ ತೆರಳಿ ಇಲ್ಲಿನ ಜಿಂದಾಲ್ ಏರ್ಸ್ಟ್ರಿಪ್ ನಿಂದ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.