EBM News Kannada
Leading News Portal in Kannada

ಅಂಬೇಡ್ಕರ್ ಕುರಿತ ಅಮಿತ್ ಶಾ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಮಾಡಿರುವ ಅಪಮಾನ : ಡಿ.ಕೆ.ಶಿವಕುಮಾರ್

0



ಬೆಳಗಾವಿ : ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹೆಸರು ಹೇಳುವ ಬದಲು ದೇವರ ನಾಮ ಜಪ ಮಾಡಿದ್ದರೆ ಮುಕ್ತಿ ದೊರೆಯುತ್ತಿತ್ತು ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಮಾಡಿರುವ ಅಪಮಾನ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುರುವಾರ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಅಂಬೇಡ್ಕರ್ ಹಾಗೂ ಸಂವಿಧಾನವನ್ನು ನಾವುಗಳು ಪ್ರತಿಪಾದನೆ ಮಾಡದೆ ಇನ್ಯಾರು ಮಾಡಲು ಸಾಧ್ಯ. ಅಂಬೇಡ್ಕರ್ ನಮಗೆ ಸಂವಿಧಾನ ಕೊಟ್ಟವರು. ಅವರಿಗೆ ನಾವೆಲ್ಲ ಗೌರವ ಕೊಡುವುದು ನಮ್ಮ ಕರ್ತವ್ಯ. ಬಸವಣ್ಣ ಅವರ ಕಾಯಕವೇ ಕೈಲಾಸ ತತ್ವದಲ್ಲಿ ನಾವೆಲ್ಲರೂ ನಂಬಿಕೆ ಇಟ್ಟಿರುವವರು. ಸಂವಿಧಾನಕ್ಕೆ ಮತ್ತು ಅಂಬೇಡ್ಕರ್‌ಗೆ ಮಾಡಿರುವ ಅಪಮಾನದ ಕುರಿತು ಹೆಚ್ಚಿನ ಚರ್ಚೆಯನ್ನು ನಾವೆಲ್ಲರೂ ಮಾಡಬೇಕಿದೆ’ ಎಂದು ಹೇಳಿದರು.

Leave A Reply

Your email address will not be published.