EBM News Kannada
Leading News Portal in Kannada

ದಿಲ್ಲಿ ಅಬಕಾರಿ ನೀತಿ ಹಗರಣ: ಕೇಜ್ರಿವಾಲ್ ವಿರುದ್ಧ ಪ್ರಾಸಿಕ್ಯೂಷನ್ ಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ!

0



ಹೊಸದಿಲ್ಲಿ: ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಎಎಪಿ ಮುಖ್ಯಸ್ಥ ಮತ್ತು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ(ಪ್ರಾಸಿಕ್ಯೂಷನ್ ಗೆ) ಒಳಪಡಿಸಲು ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಶನಿವಾರ ಜಾರಿ ನಿರ್ದೇಶನಾಲಯಕ್ಕೆ(ಈಡಿ) ಅನುಮತಿ ನೀಡಿದ್ದಾರೆ ಎಂದು ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿರುವ ಬಗ್ಗೆ ವರದಿಯಾಗಿದೆ, ಆದರೆ ವರದಿಯನ್ನು ಸುಳ್ಳು ಎಂದು ಎಎಪಿ ನಾಯಕರು ಹೇಳಿಕೊಂಡಿದ್ದಾರೆ.

ಅಧಿಕಾರಿಗಳ ಪ್ರಕಾರ, ಜಾರಿ ನಿರ್ದೇಶನಾಲಯ ಡಿ.5ರಂದು ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ಕೋರಿತ್ತು. ದಿಲ್ಲಿ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದು, ಈ ನಡುವಲ್ಲೇ ವಿಚಾರಣೆಗೆ ಅನುಮತಿ ನೀಡಿರುವುದು ಕೇಜ್ರಿವಾಲ್ ಅವರಿಗೆ ದೊಡ್ಡ ಸಂಕಷ್ಟ ಎದುರಾದಂತಾಗಿದೆ ಎಂದು ವರದಿಯಾಗಿತ್ತು.

ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಈಡಿಗೆ ಅನುಮತಿ ನೀಡಿದ ಕುರಿತು ಎಎಪಿ ಸಂಸದ ಸಂಜಯ್ ಸಿಂಗ್ ಪ್ರತಿಕ್ರಿಯಿಸಿದ್ದು, ಬೆಳಿಗ್ಗೆಯಿಂದ ಈ ನಕಲಿ ಸುದ್ದಿ ಹರಡುತ್ತಿದೆ. ಈ ಮಾಹಿತಿಯ ಮೂಲ ಯಾವುದು ಎಂದು ನನಗೆ ತಿಳಿದಿಲ್ಲ. ದಿಲ್ಲಿ ಲೆಫ್ಟಿನೆಂಟ್ ಗವರ್ನರ್ ಇಂತಹ ಯಾವುದೇ ಅನುಮತಿ ನೀಡಿದ್ದರೆ ಅದನ್ನು ಸಾರ್ವಜನಿಕಗೊಳಿಸಬೇಕು, ಅನುಮತಿ ನೀಡಿರುವ ಪತ್ರ ಎಲ್ಲಿದೆ ಎಂದು ಪ್ರಶ್ನಿಸಿದ್ದಾರೆ.

Leave A Reply

Your email address will not be published.