EBM News Kannada
Leading News Portal in Kannada

ಪಂಜಾಬ್ | ಮೂರು ಅಂತಸ್ತಿನ ಕಟ್ಟಡ ಕುಸಿತ: ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

0


ಚಂಡೀಗಢ: ಪಂಜಾಬ್ ನ ಮೊಹಾಲಿಯಲ್ಲಿ ಶನಿವಾರ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಕನಿಷ್ಠ ಎಂಟು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಮೊಹಾಲಿ ಎಸ್ ಎಸ್ ಪಿ ದೀಪಕ್ ಪರೀಕ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಕಟ್ಟಡ ಕುಸಿತದಿಂದ ಅವಶೇಷಗಳಡಿ ಎಷ್ಟು ಜನರು ಸಿಲುಕಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಸ್ಥಳದಲ್ಲಿ ಎನ್ ಡಿಆರ್ ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ದಳದ ತಂಡಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ ಎಂದು ಹೇಳಿದ್ದಾರೆ.

ಪಕ್ಕದ ಕಟ್ಟಡದ ನೆಲಮಾಳಿಗೆಯಲ್ಲಿ ಕೆಲಸ ನಡೆಯುತ್ತಿತ್ತು. ಈ ವೇಳೆ ಕಟ್ಟಡ ಕುಸಿದಿದೆ. ಕಟ್ಟಡದ ಮೂರು ಮಹಡಿಗಳಲ್ಲಿ ಜಿಮ್ ಕಾರ್ಯನಿರ್ವಹಿಸುತ್ತಿತ್ತು. ಏಳರಿಂದ ಎಂಟು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave A Reply

Your email address will not be published.