ನಕ್ಸಲರಿಂದ ಮೋದಿ ಹತ್ಯೆಗೆ ಸಂಚು: ಪ್ರಧಾನಿ ಭದ್ರತೆ ಮತ್ತಷ್ಟು ಬಿಗಿ
ನವದೆಹಲಿ: ನಕ್ಸಲರು ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಪ್ರಧಾನಿಯ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ ಎಂದು ಸೋಮವಾರ ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ಈ ಸಂಬಂಧ ಇಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಗೃಹ ಕಾರ್ಯದರ್ಶಿ ರಾಜೀವ್ ಗೌಬ್ ಮತ್ತು ಗುಪ್ತಚರ ಇಲಾಖೆ ನಿರ್ದೇಶಕ ರಾಜೀವ್ ಜೈನ್ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ, ಪ್ರಧಾನಿ ಮೋದಿ ಭದ್ರತೆಯನ್ನು ಪರಿಶೀಲಿಸಿದರು.
ಇತರೆ ಸಂಸ್ಥೆಗಳನ್ನು ಸಂಪರ್ಕಿಸಿ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯನ್ನು ಬಲಪಡಿಸಲು ಬೇಕಾದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಗೃಹ ಸಚಿವಾಲಯ ಸೂಚಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಕ್ಸಲರು ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹತ್ಯೆ ಮಾದರಿಯಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರ ಹತ್ಯೆ ಮಾಡಲು ಸಂಚು ರೂಪಿಸಿದ್ದನ್ನು ಮಹಾರಾಷ್ಟ್ರ ಪೊಲೀಸರು ಬಯಲು ಮಾಡಿದ್ದರು.