ಅರವಿಂದ್ ಕೇಜ್ರಿವಾಲ್ ಗೆ ಅನಾರೋಗ್ಯ: ಪ್ರಕೃತಿ ಚಿಕಿತ್ಸೆಗಾಗಿ ಬೆಂಗಳೂರಿಗೆ
ನವದೆಹಲಿ:ಲೆಪ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ನಿವಾಸದ 9 ದಿನಗಳ ಪ್ರತಿಭಟನೆ ಅಂತ್ಯಗೊಳಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅನಾರೋಗ್ಯ ಹಿನ್ನೆಲೆಯಲ್ಲಿ ಬುಧವಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ಜಾರೆ.
ಅರವಿಂದ್ ಕೇಜ್ರಿವಾಲ್ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಮೂಲಗಳು ತಿಳಿಸಿವೆ. ಮಧುಮೇಹದಿಂದ ಬಳಲುತ್ತಿರುವ ಕೇರ್ಜಿವಾಲ್ ಅವರ ಸಕ್ಕರೆ ಕಾಯಿಲೆ ಉಲ್ಬಣಗೊಂಡಿದೆ.
ಹೀಗಾಗಿ 10 ದಿನಗಳ ಪ್ರಕೃತಿ ಚಿಕಿತ್ಸೆಗಾಗಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ. ಚಿಕಿತ್ಸೆಗಾಗಿ ಬೆಂಗಳೂರಿಗೆ ಬರಲು ಈ ಮೊದಲೇ ಸಿದ್ಧತೆ ನಡೆಸಲಾಗಿತ್ತು,. ಆದರೆ ಪ್ರತಿಭಟನೆ ಮಧ್ಯೆ ಬಂದಿತು ಎಂದು ಡಿಸಿಎಂ ಮನೀಶ್ ಸಿಸೋಡಿಯಾ ಹೇಳಿದ್ದಾರೆ.