EBM News Kannada
Leading News Portal in Kannada

ಪಾದರಾಯನಪುರ ಗಲಭೆಕೋರರಿಗೆ ಕಠಿಣ ಶಿಕ್ಷೆಯಾಗಲಿ; ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

0

ಬೆಂಗಳೂರು (ಏ. 20): ಸೀಲ್​ಡೌನ್ ಆಗಿರುವ ಬೆಂಗಳೂರಿನ ಪಾದರಾಯನಪುರದಲ್ಲಿ ನಿನ್ನೆ ರಾತ್ರಿ ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಘಟನೆ ಇಡೀ ರಾಜ್ಯವನ್ನೇ ತಲೆತಗ್ಗಿಸುವಂತೆ ಮಾಡಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಕೂಡ ರಾಜ್ಯ ಗೃಹ ಇಲಾಖೆಯಿಂದ ವರದಿ ಕೇಳಿದೆ. ಈ ಘಟನೆ ವಿರುದ್ಧ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕೃತ್ಯವೆಸಗಿದವರಿಗೆ ಕಠಿಣ ಶಿಕ್ಷೆ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೊರೋನಾ ವೈರಸ್​ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಪಾದರಾಯನಪುರವನ್ನು ಈಗಾಗಲೇ ಸೀಲ್​ಡೌನ್ ಮಾಡಲಾಗಿದೆ. ಈ ಪ್ರದೇಶದಲ್ಲಿ ಕೊರೋನಾ ಸೋಂಕಿತರ ಜೊತೆ ಸಂಪರ್ಕ ಹೊಂದಿದ್ದವರನ್ನು ಕ್ವಾರಂಟೈನ್‌ನಲ್ಲಿ ಇರಿಸಲು ಭಾನುವಾರ ರಾತ್ರಿ ಪೊಲೀಸರು, ಬಿಬಿಎಂಪಿ ಅಧಿಕಾರಿಗಳು ಮತ್ತು ವೈದ್ಯಕೀಯ ಸಿಬ್ಬಂದಿಗಳು ತೆರಳಿದ್ದರು. ಮುನ್ನೆಚ್ಚರಿಕಾ ಕ್ರಮವಾಗಿ ಕೊರೋನಾ ಸೋಂಕಿತರ ಜೊತೆ ದ್ವಿತೀಯ ಸಂಪರ್ಕ ಹೊಂದಿದ್ದ 58 ಜನರನ್ನು ಕ್ವಾರಂಟೈನ್​ನಲ್ಲಿರ ಈ ವೇಳೆ ಸ್ಥಳೀಯರು ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು.

Leave A Reply

Your email address will not be published.