EBM News Kannada
Leading News Portal in Kannada

ಕರೋನಾ ವಿರುದ್ಧ ಹೋರಾಟಕ್ಕಾಗಿ 160 ಐಷಾರಾಮಿ ಕಾರಗಳನ್ನು ದೇಣಿಗೆ ನೀಡಿದ ಜೆಎಲ್ಆರ್

0

ಚೀನಾದಿಂದ ಆರಂಭವಾದ ಮಾಹಾಮಾರಿ ಕರೋನಾ ವೈರಸ್ ಇದೀಗ ವಿಶ್ವದ ಬಹುತೇಕ ರಾಷ್ಟ್ರಗಳಿಗೆ ವ್ಯಾಪ್ತಿಸಿದ್ದಲ್ಲದೇ ದಿನಂಪ್ರತಿ ಸಾವಿರಾರು ಜನ ಬಲಿ ಬಲಿ ಪಡೆಯುತ್ತಿದ್ದು, ವೈರಸ್ ವಿರುದ್ಧ ಹೋರಾಟಕ್ಕಾಗಿ ವೈದ್ಯಕೀಯ ಉಪಕರಣಗಳ ಕೊರತೆ ಎದುರಾಗಿದೆ. ಇಡೀ ಜಗತ್ತನ್ನೇ ಆತಂಕಕ್ಕೆ ದೂಡಿರುವ ಮಹಾಮಾರಿ ಕರೋನಾ ವಿರುದ್ದ ಹೋರಾಟಕ್ಕೆ ವಿಶ್ವದ ಪ್ರಮುಖ ಒಂದಾಗಿ ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರದ ಪ್ರಯತ್ನಗಳಿಗೆ ಆಟೋ ಉತ್ಪಾದನಾ ಕಂಪನಿಗಳು ಅತಿ ಹೆಚ್ಚು ದೇಣಿಗೆ ನೀಡುವ ಮೂಲಕ ಕಾರ್ಪೋರೆಟ್ ಸಾಮಾಜಿಕ ಜವಾಬ್ದಾರಿಯನ್ನು ಮೇರೆದಿವೆ. ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಈಗಾಗಲೇ ಹಲವು ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹಣಕಾಸಿನ ನೆರವು ಘೋಷಣೆ ಮಾಡಿರುವುದಲ್ಲದೇ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಅಭಿವೃದ್ದಿಪಡಿಸುತ್ತಿವೆ.

ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದ್ದು, ಕರೋನಾ ವಿರುದ್ಧ ಹೋರಾಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಣಿಗೆ ಸಂಗ್ರಹ ಅಭಿಯಾನವನ್ನು ಕೈಗೊಂಡಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.

ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಮುಂದಾಗಿವೆ. ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಮತ್ತು ಐಸಿಯು ಯುನಿಟ್‌ಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದು, ಆರೋಗ್ಯ ಇಲಾಖೆಯ ಬೇಡಿಕೆಗಳನ್ನು ಪೂರೈಸಲು ಸಿದ್ದವಾಗುತ್ತಿವೆ.

Leave A Reply

Your email address will not be published.