Kaveri Water Row : ‘ತಮಿಳುನಾಡಿಗೆ ನೀರು ಬಿಡೋದು ನಿಲ್ಲಿಸಿದ್ರೆ ನ್ಯಾಯಾಂಗ ನಿಂದನೆ ಆಗಲ್ಲ’ : H.D ಕುಮಾರಸ್ವಾಮಿ | Kannada Dunia | Kannada News | Karnataka News
23-09-2023 5:36PM IST
/
No Comments /
Posted In: Karnataka, Latest News, Live News
ಮಂಡ್ಯ : ತಮಿಳುನಾಡಿಗೆ ನೀರು ಬಿಡೋದು ನಿಲ್ಲಿಸಿದ್ರೆ ನ್ಯಾಯಾಂಗ ನಿಂದನೆ ಆಗಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ಹಿತರಕ್ಷಣಾ ಸಮಿತಿ ಪ್ರತಿಭಟನೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭಾಗಿಯಾಗಿದ್ದಾರೆ.
ನಂತರ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ ಸುಪ್ರೀಂಕೋರ್ಟ್ ತೀರ್ಪಿನಂತೆ ನೀರು ಬಿಡಬೇಕು. ಇಲ್ಲದಿದ್ದರೇ ನ್ಯಾಯಾಂಗ ನಿಂದನೆ ಆಗುತ್ತೆ ತಮಿಳುನಾಡಿಗೆ ನೀರು ನಿಲ್ಲಿಸಿದರೆ ನ್ಯಾಯಾಂಗ ನಿಂದನೆ ಆಗಲ್ಲ ಎಂದರು.
2016 ತೀರ್ಪು ಪ್ರಸ್ತಾಪಿಸಿ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ ಹೆಚ್ಡಿಕೆ ತಮಿಳುನಾಡಿಗೆ ನೀರು ಬಿಡಲು ಆಗಲ್ಲ ಎಂದು ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲಿ ಎಂದರು. ಪಾಲಿಸಲು ಆಗದ ತೀರ್ಪನ್ನ ಪಾಲಿಸದಿದ್ದರೆ ನ್ಯಾಯಾಂಗ ನಿಂದನೆ ಆಗಲ್ಲ. ಆಂಧ್ರದ ನೀರಾವರಿ ಪ್ರಕರಣ ಸಂಬಂಧ ನ್ಯಾಯಮೂರ್ತಿ ಉದಮ್ ಮಲ್ಲಿಕ್ ಹೇಳಿದ್ದರು. ಸೆ.22, 2016 ನ್ಯಾಯಾಲಯ ಅದನ್ನ ಎತ್ತಿಹಿಡಿದಿತ್ತು, ಅದೇ ರೀತಿ ರಾಜ್ಯ ಸರ್ಕಾರ ನೀರು ಬಿಡಲು ಆಗಲ್ಲ ಎಂದು ಮೇಲ್ಮನವಿ ಸಲ್ಲಿಸಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.